Saturday, June 13, 2026
spot_imgspot_img
spot_imgspot_img

ಮಡಿಕೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಮುಖ್ಯ ಶಿಕ್ಷಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -
vtv vitla

ಮಡಿಕೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೈಸ್ಕೂಲ್‌ ಮುಖ್ಯ ಶಿಕ್ಷಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಚೆಯ್ಯಂಡಾಣೆಯ ಅನುದಾನಿತ ಶಾಲೆಯೊಂದರ ಮುಖ್ಯ ಶಿಕ್ಷಕ ಮನೋಹರ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಾಗಿದೆ.

ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇವರಿಬ್ಬರೂ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದು, ಅವರನ್ನು ಮುಖ್ಯ ಶಿಕ್ಷಕರ ಕಚೇರಿಗೆ ಕರೆಸಿಕೊಂಡು ಅಸಭ್ಯ ವರ್ತನೆ ತೋರಿದ ಆರೋಪವಿದೆ.

ತಮಗೆ ಶಾಲೆಯಲ್ಲಿ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ವಿದ್ಯಾರ್ಥಿಯರು ಪೋಷಕರಿಗೆ ತಿಳಿಸಿದ್ದರು. ಅವರು ಪೊಲೀಸ್‌ ಠಾಣೆಗೆ ದೂರು ನೀಡಿದರು. ಇದೀಗ ಮಡಿಕೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!