Tuesday, June 9, 2026
spot_imgspot_img
spot_imgspot_img

ಮಣಿಪಾಲ: ಪಾದರಕ್ಷೆ ಮಳಿಗೆಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ!

- Advertisement -
- Advertisement -

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಪಾದರಕ್ಷೆ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಸಂಭವಿಸಿದೆ.

ಅಂಗಡಿ ಮಾಲೀಕರು ವ್ಯವಹಾರ ಮುಗಿಸಿ ಗುರುವಾರ ರಾತ್ರಿ ಮನೆಗೆ ತೆರಳಿದ ಬಳಿಕ ಈ ಘಟನೆ ಸಂಭವಿಸಿದ್ದು, ಶಾಟ್ ಸರ್ಕ್ಯೂಟ್ ನಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಅಂಗಡಿಯೊಳಗೆ ಪೂಟ್‌ವೇರ್‌ ತುಂಬಿದ್ದರಿಂದಾಗಿ ಬೆಂಕಿ ಹೊತ್ತಿ ಉರಿದು ಮಳಿಗೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!