Saturday, June 28, 2025
spot_imgspot_img
spot_imgspot_img

ಮತ್ತೆ 4000 ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆ; ಒಂದೇ ದಿನ 255 ಮಂದಿ ಮಹಾಮಾರಿಗೆ ಬಲಿ

- Advertisement -
- Advertisement -

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,194 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 255 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,15,714 ಕ್ಕೆ ಏರಿಕೆಯಾಗಿದೆ.


ಇನ್ನು ದೇಶದಲ್ಲಿ 42,219 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 6208 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44,26,328 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

- Advertisement -

Related news

error: Content is protected !!