Sunday, June 29, 2025
spot_imgspot_img
spot_imgspot_img

ಮದುವೆ ಊಟ ಸೇವಿಸಿದ 1200 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

- Advertisement -
- Advertisement -

ಮೆಹ್ಸಾನ: ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಸ್ಥಳೀಯ ಕಾಂಗ್ರೆಸ್‌ ಮುಖಂಡರೊಬ್ಬರ ಪುತ್ರನ ವಿವಾಹ ಸಮಾರಂಭದಲ್ಲಿ ಊಟ ಸೇವಿಸಿದ ಸುಮಾರು 1200 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ವಿಸ್ನಾಗರ ತಾಲೂಕಿನ ಸಾವಳ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಶನಿವಾರ ಪೊಲೀಸರು ಘಟನೆ ಕುರಿತು ಮಾಧ್ಯಮಗಳಿಗೆ ತಿಳಿಸಿದ್ದಾರೆ.

vtv vitla
vtv vitla

ಊಟ ಸೇವಿಸಿದ 1200 ಮಂದಿಗೆ ವಾಂತಿ, ಕೆಲವರಿಗೆ ಬೇಧಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡವರನ್ನು ವಿಸ್ನಾಗರ, ಮೆಹ್ಸಾನಾ ಮತ್ತು ವಡ್ನಾಗರದಲ್ಲಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸೇವಿಸಿದ ಆಹಾರದ ಮಾದರಿ ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ವರದಿ ಇನ್ನಷ್ಟೇ ಬರಬೇಕಿದೆ ಎಂದು ವಿಸ್ನಾಗರ ಗ್ರಾಮೀಣ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!