Friday, April 26, 2024
spot_imgspot_img
spot_imgspot_img

ಮದುವೆ ದಿಬ್ಬಣದ ಟೆಂಪೊ ಪಲ್ಟಿ; ಐದಕ್ಕೂ ಹೆಚ್ಚು ಮಂದಿಗೆ ಗಾಯ..!

- Advertisement -G L Acharya panikkar
- Advertisement -

ಕಾರವಾರ: ಇಲ್ಲಿನ ಕುಮಟಾ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ಟೆಂಪೋ ಪಲ್ಟಿಯಾಗಿ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ನಗರದ ಹೊರಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ ಒಕ್ಕಲಿಗರ ಸಭಾ ಭವನದಿಂದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟೆಂಪೋದಲ್ಲಿ 20ಕ್ಕೂ ಹೆಚ್ಚು ಮಂದಿ ಇದ್ದು ಘಟನೆಯಲ್ಲಿ 5 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ,ಯಾವುದೇ ತೊಂದರೆ ಆಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಬಳಿಕ ಗಾಯಗೊಂಡವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!