Wednesday, June 24, 2026
spot_imgspot_img
spot_imgspot_img

ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ; ನಾಲ್ವರು ಸಾವು, 60 ಮಂದಿಗೆ ಗಾಯ

- Advertisement -
- Advertisement -

ರಾಜಸ್ಥಾನದ ಜೋಧಪುರದಲ್ಲಿ ಮದುವೆ ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಮಂದಿ ಮೃತಪಟ್ಟಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಭೂಂಗಾರ ಗ್ರಾಮದಲ್ಲಿ ಗುರುವಾರ ಅವಘಡ ಸಂಭವಿಸಿದ್ದು ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಸುಟ್ಟ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಗಾಯಗೊಂಡ 60 ಮಂದಿಯಲ್ಲಿ 42 ಮಂದಿಯನ್ನು ಎಂಜಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಈ ಹಿಂದೆ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!