Saturday, June 6, 2026
spot_imgspot_img
spot_imgspot_img

ಮನೆ ಹಾನಿ ಪ್ರದೇಶಗಳಿಗೆ ನಾಳೆ ಸಿಎಂ ಭೇಟಿ

- Advertisement -
- Advertisement -

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳನ್ನು ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ, ಭೂಕುಸಿತ, ಮನೆ-ಬೆಳೆ ಹಾನಿ ಉಂಟಾಗಿದೆ. ಈ ಹಿನ್ನೆಲೆ ಮಳೆ ಹಾನಿ ಪ್ರದೇಶಕ್ಕೆ ನಾಳೆಯಿಂದ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಕಳೆದ 10 ದಿನಗಳಿಂದ ವ್ಯಾಪಕ ಮಳೆಯಾಗ್ತಿದೆ. ನಾಳೆಯಿಂದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಭೇಟಿ ಕೊಡ್ತೀನಿ. ಮಳೆ ಹಾನಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳ ಬಗ್ಗೆ ಸಭೆ ನಡೆಸುತ್ತೇನೆ. ಅಲ್ಲಿನ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿ ಅಲ್ಲೇ ಸೂಚನೆಗಳನ್ನ ನೀಡುವೆ ಎಂದಿದ್ದಾರೆ.

ಮಂಗಳವಾರ ಕೊಡಗು ಮತ್ತು ಮಂಗಳೂರಿಗೆ ಭೇಟಿ ಕೊಟ್ಟು, ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತೇನೆ. ಬುಧವಾರ ಕಾರವಾರ ಜಿಲ್ಲೆಗೆ ಭೇಟಿ ನೀಡುತ್ತೇನೆ ಎಂದು ಸಿಎಂ ಹೇಳಿದರು.

- Advertisement -

Related news

error: Content is protected !!