Saturday, June 28, 2025
spot_imgspot_img
spot_imgspot_img

ಮರ್ಯಾದಾ ಹತ್ಯೆ; ಅಳಿಯನನ್ನು ಚಾಕುವಿನಿಂದ ಇರಿದು ಕೊಂದ ಮಾವ ಪೊಲೀಸರ ಅತಿಥಿ

- Advertisement -
- Advertisement -
vtv vitla

ಬಾಗಲಕೋಟೆ: ಮಗಳನ್ನು ಪ್ರೀತಿಸಿ ಮದುವೆಯಾದ ಎಂಬ ಸಿಟ್ಟಿನಿಂದ ಅಳಿಯನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿಕೊಂಡು ಶನಿವಾರ ತಡರಾತ್ರಿ ಜಮಖಂಡಿ ತಾಲ್ಲೂಕಿನ ಟಕ್ಕೋಡದಲ್ಲಿ ಕೊಲೆ ಮಾಡಿದ್ದಾರೆ.

ಜೈನ ಸಮುದಾಯಕ್ಕೆ ಸೇರಿದ ಭುಜಬಲಿ ಕರ್ಜಗಿ (34) ಕೊಲೆಯಾದ ಯುವಕ.

ಕ್ಷತ್ರಿಯ ಸಮಾಜದ ತಮ್ಮನಗೌಡ ಪಾಟೀಲ ಪುತ್ರಿ ಭಾಗ್ಯಶ್ರೀ ಅನ್ನು ಭುಜಬಲಿ ಕರ್ಜಗಿ ಪ್ರೀತಿಸಿ ಕೆಲ ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದರು. ಶನಿವಾರ ರಾತ್ರಿ ಹನುಮಾನ ದೇವರ ಪಲ್ಲಕ್ಕಿ ಉತ್ಸವ ಮುಗಿಸಿ ಸಹೋದರನ ಪುತ್ರ ಸುಮೇದ್ ನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗಲು ಮುಂದಾದಾಗ ಕಾರದ ಪುಡಿ ಎರಚಲಾಗಿದೆ. ಆಗ ವಿರೋಧಿಸಿ ಸುಮೇದ್‌ ಓಡಿ ಹೋಗಿದ್ದು, ಭುಜಬಲಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸಾವಳಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ತಮ್ಮನಗೌಡ ಪಾಟೀಲ ಬಂಧಿಸಲಾಗಿದ್ದು, ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ.

- Advertisement -

Related news

error: Content is protected !!