Friday, May 3, 2024
spot_imgspot_img
spot_imgspot_img

ಮಳೆಯಿಂದಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದೆ. ರಾಜಕಾಲುವೆ ನಿರ್ಮಾಣ ಮಾಡುವುದಕ್ಕೆ ನಿರ್ಧರಿಸಿದ್ದೇವೆ. ಕಂದವಾರ ಕೆರೆಯಿಂದ ಅಮಾನಿಕೆರೆವರೆಗೆ ರಾಜಕಾಲುವೆ ನಿರ್ಮಾಣ ಮಾಡುತ್ತೇವೆ. ನೀರು ನುಗ್ಗಿರುವ ಮನೆಗೆ 10 ಸಾವಿರ ಪರಿಹಾರಕ್ಕೆ ಸೂಚನೆ ಕೊಡಲಾಗಿದೆ. ಮಳೆಯಿಂದ ಮನೆ ಸಂಪೂರ್ಣ ಬಿದಿದ್ರೆ 5 ಲಕ್ಷ ಪರಿಹಾರ ನೀಡಲಾಗುವುದು.

ಮಳೆಯಿಂದ ಮನೆ ಭಾಗಶಃ ಬಿದಿದ್ರೆ 3 ಲಕ್ಷ ರೂ. ಪರಿಹಾರ ನೀಡುತ್ತೇವೆ. ಜಿಲ್ಲೆಯಲ್ಲಿ ಒಟ್ಟು 24 ಮನೆಗಳು ಸಂಪೂರ್ಣ ಕುಸಿತವಾಗಿವೆ. ಹಾನಿ ಕುರಿತು ಚಿಕ್ಕಬಳ್ಳಾಪುರ ಡಿಸಿ ವರದಿಯನ್ನು ನೀಡಿದ್ದಾರೆ. ವರದಿ ಆಧರಿಸಿ ಪರಿಹಾರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಚಿಕ್ಕಬಳ್ಳಾಪುರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಸೂಚನೆಯನ್ನ ನೀಡಿದ್ದೇನೆ. ಮಳೆಯಿಂದ ಬೆಳೆ ಹಾನಿ ಪರಿಹಾರದ ಬಗ್ಗೆ ಸಭೆ ನಡೆಸುತ್ತೇನೆ. ಬೆಂಗಳೂರಿಗೆ ಹೋಗಿ ಕಂದಾಯ ಸಚಿವರ ಜತೆ ಸಭೆ ಮಾಡ್ತೇನೆ. ಎಲ್ಲ ಸಚಿವರಿಗೂ ಜಿಲ್ಲೆಗಳಿಗೆ ಹೋಗಿ ಪರಿಶೀಲಿಸಲು ಸೂಚನೆ ಕೊಡಲಾಗಿದೆ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಸೂಚಿಸಿದ್ದೇನೆ. ಸಚಿವರ ಭೇಟಿ ವೇಳೆ ಎಲ್ಲ ಅಧಿಕಾರಿಗಳು ಹಾಜರಿರಬೇಕು. ಚುನಾವಣಾ ಅಧಿಕಾರಿಗಳಿಗೆ ನಾನು ಪತ್ರವನ್ನು ಬರೆದಿದ್ದೇನೆ. ಕೋಲಾರ ಸೇರಿದಂತೆ ಬೇರೆ ಕಡೆ ಹೋಗಿ ಪರಿಶೀಲಿಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳಿಂದ ಬರ್ಬಾದ್ ಸಮಾವೇಶ ಅನ್ನೊ ಸಿದ್ದು ಟೀಕೆ ವಿಚಾರವಾಗಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ಸಚಿವರು ಜಿಲ್ಲೆಯಲ್ಲಿ ಇದ್ದಾರೆ. ಮಳೆಹಾನಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಗಳಲ್ಲಿ ಕೆಲಸ ಮಾಡ್ತಿದ್ದಾರೆ.

ಮಳೆ ಹಾನಿ ವಿಡಿಯೊ ಸಂವಾದ ನಡೆಸಲು ಚುನಾವಣಾ ಆಯೋಗದ ಅನುಮತಿ ಬೇಕು ಅಂದ್ರು. ಇನ್ನೂ ಕೆಲವರು ಕೆಲವು ಜಿಲ್ಲೆಗಳಿಗೆ ಪ್ರವಾಸ ಹೋಗಬೇಕು. ಅಧಿಕಾರಿಗಳನ್ನು ಕರೆದುಕೊಂಡು ಹೋಗಲು ನೀತಿ ಸಂಹಿತೆ ಅಡ್ಡ ಇದೆ. ವಿನಾಯಿತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸಿಎಂ ಬೊಮ್ಮಾಯಿ ಮಳೆ ಹಾನಿ ವೀಕ್ಷಣೆ ಮಾಡಿದ್ದಾರೆ. ಕಂದವಾರ ಕೆರೆ ಕೋಡಿ ಬಿದ್ದು ಹಾನಿಯಾದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಡಿಸಿ, ಸಿಇಒ, ಎಸ್​ಪಿಯಿಂದ ಸಿಎಂ ಬೊಮ್ಮಾಯಿಗೆ ಮಾಹಿತಿ ನೀಡಲಾಗಿದೆ. ಸಿಎಂಗೆ ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್, ಕೋಲಾರ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಸಾಥ್​ ನೀಡಿದ್ದಾರೆ.

vtv vitla
- Advertisement -

Related news

error: Content is protected !!