Saturday, April 20, 2024
spot_imgspot_img
spot_imgspot_img

ಮಹಾಕಾಳಿಗೆ ಮೋದಿ ನಮನ: ಜನರನ್ನು ಕೊರೊನಾ ಸೋಂಕಿನಿಂದ ರಕ್ಷಿಸು ಎಂದು ಪ್ರಾರ್ಥಿಸಿ ಮಹಾಕಾಳಿಗೆ ಬೆಳ್ಳಿ ಕಿರೀಟ ಅರ್ಪಿಸಿದ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ನವದೆಹಲಿ: ಎರಡು ದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರು 51 ಶಕ್ತಿಪೀಠಗಳಲ್ಲಿ ಒಂದಾದ ಜಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬೆಳ್ಳಿ ಬೆಳ್ಳಿ ಕಿರೀಟ ಅರ್ಪಿಸಿದ್ದಾರೆ.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿರವರು ನನಗೆ ಒಂದು ಜಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿದೆ. ಮಹಾ ಕಾಳಿ ದೇವರ ಬಳಿ ಜನರನ್ನು ಕೊರೊನಾ ಸೋಂಕಿನಿಂದ ರಕ್ಷಿಸು ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.

ಈ ದೇವಾಲಯ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕವಾಗಿ ಉಪಯೋಗವಾಗುತ್ತಿದೆ. ಬಹು ಮುಖ್ಯವಾಗಿ ಚಂಡಮಾರುತಗಳಂತಹ ನೈಸರ್ಗಿಕ ವಿಪತ್ತು ಸಂದರ್ಭದಲ್ಲಿ ಜನರಿಗೆ ಆಶ್ರಯ ನೀಡುತ್ತಿದೆ. ದೇವಾಲಯದ ಅಭಿವೃದ್ಧಿಗೆ ಭಾರತ ಕೂಡ ಸಹಾಯ ಮಾಡಲಿದೆ ಎಂದರು.

ಆ ಬಳಿಕ ಪ್ರಧಾನಿ ಮೋದಿ ಅವರು ಒರ್ಕಾಂಡಿ ದೇವಾಲಯಕ್ಕೂ ಮೋದಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮೋದಿ ಅವರ ಭೇಟಿಯ ಹಿನ್ನೆಲೆಯ ಬಾಂಗ್ಲಾ ಸರ್ಕಾರ ಈ ಎರಡು ಪ್ರಮುಖ ದೇವಾಲಯಗಳನ್ನು ವಿಶೇಷವಾಗಿ ಜೀಣೋದ್ಧಾರ ಮಾಡಿ ಸ್ವಾಗತ ಕೋರಿದೆ.

- Advertisement -

Related news

error: Content is protected !!