Friday, May 10, 2024
spot_imgspot_img
spot_imgspot_img

ಮಾಂಸಾಹಾರ ಸೇವನೆ ಮಾಡಿ ದೇವಾಲಯಕ್ಕೆ ಭೇಟಿ ನೀಡಿದ ಆರೋಪ; ಸಿಟಿ ರವಿ ವಿರುದ್ಧ ಸಾರ್ವಜನಿಕರಿಂದ ಭಾರೀ ಆಕ್ರೋಶ..!!

- Advertisement -G L Acharya panikkar
- Advertisement -

ಕಾರವಾರ: ಈ ಹಿಂದೆ ಮಾಂಸ ಸೇವನೆ ಮಾಡಿ ದೇವಾಲಯದೊಳಗೆ ಪ್ರವೇಶ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾರಿ ವಿರೋಧವನ್ನು ಎದುರಿಸಿದ್ದರು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಶಾಸಕರೊಬ್ಬರ ಮನೆಯಲ್ಲಿ ಭರ್ಜರಿ ಬಾಡೂಟವನ್ನು ಸವಿದು ದೇವಾಲಯ ಪ್ರವೇಶ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಫೆಬ್ರವರಿ 19ರಂದು ಭಾನುವಾರ ಉತ್ತರ ಕನ್ನಡ ಜಿಲ್ಲೆಗೆ ಸಿ.ಟಿ.ರವಿ ಆಗಮಿಸಿದ್ದರು. ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ಭಟ್ಕಳಕ್ಕೆ ಸಿ.ಟಿ.ರವಿ ಆಗಮಿಸಿದ್ದರು. ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ಬಾಡೂಟ ಸವಿದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಾಡೂಟ ಸವಿದು ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಸಿ.ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಾಗಬನದ ಬಾಗಿಲು ಹಾಕಿದ್ದರಿಂದ ಗೇಟ್ ಮುಂಭಾಗದಲ್ಲಿ ದೇವರಿಗೆ ಸಿ.ಟಿ.ರವಿ ನಮಸ್ಕಾರ ಸಲ್ಲಿಸಿದ್ದರು. ನಂತರ ಗೇಟ್ ಮುಂಭಾಗದಲ್ಲಿಯೇ ಶಾಸಕ ಸುನಿಲ್ ನಾಯ್ಕ ಹಾಗೂ ಕಮಿಟಿ ಸದಸ್ಯರು ಸಿ.ಟಿ.ರವಿ ಅವರನ್ನು ಸನ್ಮಾನಿಸಿದ್ದರು. ಆದರೆ, ಕರಿಬಂಟ ಹನುಮ ದೇವಾಲಯದೊಳಗೆ ಪ್ರವೇಶ ಮಾಡಿದ್ದು, ದೇವಾಲಯದ ಒಳಗೆ ಸಂಚಾರ ಮಾಡಿದ್ದಾರೆ. ಈ ಮೂಲಕ ಹಿಂದೂಗಳ ಧಾರ್ಮಿಕ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ ಎಂದು ಸಿ.ಟಿ. ರವಿ ಅವರ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

- Advertisement -

Related news

error: Content is protected !!