Thursday, May 2, 2024
spot_imgspot_img
spot_imgspot_img

ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಪತ್ನಿ ವಿಯೋಗ

- Advertisement -G L Acharya panikkar
- Advertisement -

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ನಿಧನರಾಗಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಾಲಿ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಮೃತಪಟ್ಟಿದ್ದಾರೆ.

ವಿಜಯಮ್ಮ ಅವರು ಕಳೆದ 2 ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತಿ, ಓರ್ವ ಮಗಳು, ಮಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!