Monday, May 20, 2024
spot_imgspot_img
spot_imgspot_img

ಮಾಣಿ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಬಾಲಕ ಮೃತ್ಯು

- Advertisement -G L Acharya panikkar
- Advertisement -

ವಿಟ್ಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮಗನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಎಂಬಲ್ಲಿ ನಡೆದಿದೆ.

ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ರವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಅದ್ವಿತ್(11 ವ.) ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧಾನರಾಗಿದ್ದಾರೆ ಎಂದು ತಿಳಿದು ಬಂದಿದೆ. ದಿನೇಶ್ ರವರಿಗೂ ಗಾಯವಾಗಿದೆ.

ಬುಡೋಳಿಯ ವಿಸ್ಡ್ ಮ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅದ್ವಿತ್ ಸಾಯಂಕಾಲ ಶಾಲೆ ಬಿಟ್ಟು ತಂದೆ ದಿನೇಶ್ ರವರ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ತುಂಬೆ ಫಾದರ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಾಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ದಿನೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಾರಿಯಾಗಿದ್ದ ಲಾರಿಯನ್ನು ನೆಲ್ಯಾಡಿ ಸಮೀಪ ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!