Wednesday, July 2, 2025
spot_imgspot_img
spot_imgspot_img

ಮಾಣಿ: ರಿಕ್ಷಾ ಬೈಕ್ ನಡುವೆ ಅಪಘಾತ; ಬೈಕ್ ಸವಾರರಿಗೆ ಗಂಭೀರ ಗಾಯ

- Advertisement -
- Advertisement -
vtv vitla
vtv vitla

ಮಾಣಿ: ರಿಕ್ಷಾ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಈ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಬೈಕ್ ಸವಾರ ರಿಕ್ಷಾಗೆ ಡಿಕ್ಕಿಯಾಗಿದೆ. ಇದರಿಂದಾಗಿ ಬೈಕ್ ಸವಾರ ಹಾಗೂ ಸಹಸವಾರನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ಮಾಣಿಯಿಂದ ಗಡಿಯಾರ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಉಪ್ಪಿನಂಗಡಿಯಿಂದ ಬಂದ ಬೈಕ್ ಡಿಕಿ ಹೊಡೆದಿದೆ. ಬೈಕ್ ಸವಾರನ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!