Sunday, July 6, 2025
spot_imgspot_img
spot_imgspot_img

ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತಕ್ಕೆ 12 ಮಂದಿ ಸಾವು

- Advertisement -
- Advertisement -
suvarna gold

ಶ್ರೀನಗರ: ಹೊಸ ವರ್ಷದ ಮೊದಲ ದಿನ ದೇವಿಯ ದರ್ಶನಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಶನಿವಾರ ನಸುಕಿನ ಜಾವ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ಭವನ್​​ನಲ್ಲಿ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ತ್ರಿಕೂಟ ಬೆಟ್ಟಗಳ ಮೇಲಿರುವ ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ವರ್ಷದ ಮೊದಲ ದಿನ ದೇವಿಯ ದರ್ಶನ ಪಡೆಯಲು ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ವೇಳೆ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ಪೊಲೀಸರು ದೌಡಾಯಿಸಿದ್ದು, ಗಾಯಗೊಂಡವರನ್ನ ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡವರ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಗಾಯಗೊಂಡರವನ್ನು ಸ್ಥಳೀಯ ನಾರೈನಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಸದ್ಯ ಯಾತ್ರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!