Sunday, April 28, 2024
spot_imgspot_img
spot_imgspot_img

(ಮಾ.11) ಸಂಪಾಜೆ ಯಕ್ಷೋತ್ಸವ 2023, ಬ್ರಸ್ಮೈಕ್ಯ ಶ್ರೀ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯಸ್ಮೃತಿ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

- Advertisement -G L Acharya panikkar
- Advertisement -

ಸಂಪಾಜೆ : ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ (ರಿ) ಸಂಪಾಜೆ ಯಕ್ಷೋತ್ಸವ 2023, ಬ್ರಸ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯಸ್ಮೃತಿ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮಾ.11 ರಂದು ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಲಿದೆ.

ಸಂಪಾಜೆ ಯಕ್ಷೋತ್ಸವ – 2023 ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕಾಸರಗೋಡು ಶ್ರೀ ಎಡನೀರು ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಗುರುದೇವಾನಂದ ಸ್ವಾಮಿಗಳು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರ, ದಕ್ಷಿಣ ಗಾಣಗಾಪುರ ಗೌರವ ಸಮರ್ಪಣೆ, ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ಇದರ ಅಧ್ಯಕ್ಷ ಮಹಮ್ಮದ್ ಕುಂಞಿಗೂನಡ್ಕ ಡಾ.ಕೀಲಾರು ಸಂಸ್ಮರಣೆ, ಬೆಂಗಳೂರು ಹಿರಿಯ ನ್ಯಾಯವಾದಿಗಳಾದ ಕೆ. ಶಶಿಕಿರಣ್ ಶೆಟ್ಟಿ ಇವರಿಗೆ ಕಲಾಪೋಷಕ ಪ್ರಶಸ್ತಿ , ಮೂಡಬಿದ್ರೆ ಬಡಗು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ವೇ| ಮೂ| ಆಲಂಗಾರು ಈಶ್ವರ ಭಟ್ ವೈದಿಕ ಪ್ರಶಸ್ತಿ, ಜಗದಾಭಿರಾಮ ಪಡುಬಿದ್ರೆ ಪ್ರಸಿದ್ದ ಯಕ್ಷಗಾನ ಕಲಾವಿದ ಇವರಿಗೆ ಯಕ್ಷೋತ್ಸವ ಸಮ್ಮಾನ , ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿದ್ವಾಂಸರು, ಯಕ್ಷಗಾನ ಅರ್ಥದಾರಿಗಳು ಹಾಗೂ ಖ್ಯಾತ ವಿಮರ್ಶಕ ಡಾ| ಎಂ. ಪ್ರಭಾಕರ ಜೋಷಿ, ಖ್ಯಾತ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ, ಪ್ರಸಿದ್ದ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ರವರಿಗೆ ಅಭಿನಂದಿಸಲಿದ್ದಾರೆ.

ಶ್ರೀ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯಸ್ಮೃತಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಿದ್ವಾಂಸರು, ಯಕ್ಷಗಾನ ಅರ್ಥದಾರಿಗಳು ಹಾಗೂ ಖ್ಯಾತ ವಿಮರ್ಶಕ ಡಾ| ಎಂ. ಪ್ರಭಾಕರ ಜೋಷಿ ಗುರುವಂದನೆ ಕಾರ್ಯಕ್ರಮ, ಮಾಜಿ ಅಡ್ವೊಕೇಟ್ ಜನರಲ್ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಕೇಶವಾನಂದ ಭಾರತೀ ರಾಷ್ಟ್ರೀಯ ನ್ಯಾಯ ಪ್ರಶಸ್ತಿ, ಮಂಗಳೂರುಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ ಶೆಟ್ಟಿ ರವರಿಗೆ ಶ್ರೀ ಕೇಶವಾನಂದ ಭಾರತೀ ಶೈಕ್ಷಣಿಕ ಪ್ರಶಸ್ತಿ, ಖ್ಯಾತ ಸಂಗೀತ ಕಲಾವಿದ ಅನೂರು ಅನಂತ ಕೃಷ್ಣ ಶರ್ಮ ರವರಿಗೆ ಶ್ರೀ ಕೇಶವಾನಂದ ಭಾರತೀ ಸಂಗೀತ ಪ್ರಶಸ್ತಿ, ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ಸಂಚಾಲಕ ಕಲ್ಲಾಡಿ ದೇವಿಪ್ರಸಾದ ಶೆಟ್ಟಿ ರವರಿಗೆ ಶ್ರೀ ಕೇಶವಾನಂದ ಭಾರತೀ ಯಕ್ಷಗಾನಾದ್ವರ್ಯು ಪ್ರಶಸ್ತಿ ಪ್ರಧಾನ ನಡೆಯಲಿದೆ. ಮಡಿಕೇರಿ ನ್ಯಾಯವಾದಿ ಕೆ.ಪಿ ಬಾಲಸುಬ್ರಹ್ಮಣ್ಯ, ವೈದಿಕ ವಿದ್ವಾಂಸರಾದ ವೇ|ಮೂ| ಶ್ರೀ ಹಿರಣ್ಯ ವೆಂಕಟೇಶ್ವರ ಭಟ್ಟರು, ಯಕ್ಷಗಾನ ಕಲಾವಿದ ವಾಸುದೇವ ರಂಗಾಭಟ್ ಅಭಿನಂದನಾ ಭಾಷಣ ಮಾಡಲಿದ್ದಾರೆ.

ಸಮಾರಂಭದ ಪ್ರಯುಕ್ತ ಪ್ರಸಿದ್ದ ಕಲಾವಿದರಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರಸಂಗಗಳು ಸಂಜೆ 4 ಚೂಡಾಮಣಿ, ಗಂಟೆ 9 ರಿಂದ ತಾರಾ-ಶಶಾಂಕ, ರಾತ್ರಿ 11 ರಿಂದ ಉಷಾ ಪರಿಣಯ, ರಾತ್ರಿ 3 ರಿಂದ ಜ್ವಾಲಾ ಪ್ರತಾಪ, ಬೆಳಿಗ್ಗೆ 5 ರಿಂದ ನಾಗಾಸ್ತ್ರ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!