Thursday, April 25, 2024
spot_imgspot_img
spot_imgspot_img

(ಮಾ.19) ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ

- Advertisement -G L Acharya panikkar
- Advertisement -

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ 94cc ಹಕ್ಕುಪತ್ರ ವಿತರಣೆ ಕಾರ್ಯಕ್ರಮ, ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಮಾ.19 ರಂದು ಬೆಳಿಗ್ಗೆ ಚಂದಳಿಕೆ ಭಾರತ್ ಆಡಿಟೋರಿಯಂ ನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಭಾಗವಹಿಸಲಿದ್ದಾರೆ.

- Advertisement -

Related news

error: Content is protected !!