Saturday, April 20, 2024
spot_imgspot_img
spot_imgspot_img

ಮಿಸ್ ಯೂನಿವರ್ಸ್ ಕಿರೀಟ ತನ್ನದಾಗಿಸಿಕೊಂಡ ಭಾರತದ ಹರ್ನಾಜ್ ಸಂಧು

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla
vtv vitla

2021 ರ ಮಿಸ್ ಯುನಿವರ್ಸ್ 2021 ಕಿರೀಟವನ್ನು ಭಾರತ ತನ್ನದಾಗಿಸಿಕೊಂಡಿದೆ. ಚಂಡೀಗಢ ಮೂಲದ ಹರ್ನಾಜ್ ಸಂಧು ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಇಸ್ರೇಲ್? ನ ಐಲಾಟ್ ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 21 ವರ್ಷದ ಹರ್ನಾಜ್ ಸಂಧು ಮಿಸ್ ಯೂನಿವರ್ಸ್ ಪಟ್ಟ ಪಡೆದುಕೊಂಡಿದ್ದಾರೆ.

ಇದು ಭಾರತಕ್ಕೆ ಸಂದ 3 ನೇ ಮಿಸ್ ಯೂನಿವರ್ಸ್ ಕಿರೀಟವಾಗಿದೆ. ಈ ಮೂಲಕ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯುನಿವರ್ಸ್ ಪಟ್ಟ ದೊರಕಿದೆ. 1994 ರಲ್ಲಿ ಸುಶ್ಮಿತಾ ಸೇನ್ ಮಿಸ್ ಯೂನಿವರ್ಸ್ ಆಗಿ ಹೊರಹೊಮ್ಮಿದ್ದರು.

Sushmitha Sen – Miss Universe 1994
Lara Dutt Miss universe 2000

ಆ ಬಳಿಕ 2000ರಲ್ಲಿ ಲಾರಾ ದತ್ತ್ ಮಿಸ್ ಯೂನಿವರ್ಸ್ ಪಟ್ಟ ಅಲಂಕರಿಸಿದ್ದರು..! ಅಡ್ಲಿನ್ ಕ್ಯಾಸ್ಟಲೀನಾ 2020 ರಲ್ಲಿ ಮಿಸ್ ಯೂನಿವರ್ಸ್ ಸ್ಫರ್ಧೆಯಲ್ಲಿ 3ನೇ ರನ್ನರ್ ಅಪ್ ಆಗಿನ ಹೊರಹೊಮ್ಮಿದ್ದರು. ಇವರು ಕರಾವಳಿಯವರು ಎಂಬುವುದು ವಿಶೇಷ.! ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ಹರ್ನಾಜ್ ಸಂಧು ಅವರಿಗೆ ಮೆಕ್ಸಿಕೊದ 2020ರ ಮಾಜಿ ವಿಶ್ವ ಸುಂದರಿ ಆಂಡ್ರಿಯಾ ಮೆಜಾ ಅವರು ಕಿರೀಟವನ್ನು ತೊಡಿಸಿದ್ದಾರೆ.

Adline Castelino miss universe 3rd Runner up

ಹರ್ನಾಜ್ ಸಂಧು ಅವರಿಗೆ ಸ್ಪರ್ಧೆಯಲ್ಲಿ ಮೊದಲ ಮೂರು ಸುತ್ತಿನ ಭಾಗವಾಗಿ ಇಂದು ಯುವತಿಯರು ಎದುರಿಸುತ್ತಿರುವ ಒತ್ತಡ ಹೇಗೆ ಎದುರಿಸಬೇಕು ಹಾಗೂ ನಿಮ್ಮ ಸಲಹೆಗಳೇನು ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಹರ್ನಾಜ್ ಸಂಧು ಇಂದಿನ ಯುವ ಜನತೆ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಅದು ಆತ್ಮವಿಶ್ವಾಸ ಅವರಿಗೆ ಅವರ ಮೇಲೆ ಇರುವ ನಂಬಿಕೆಯ ಕೊರತೆ. ಇತರರು ಏನೆಂದುಕೊಳ್ಳುತ್ತಾರೊ ಎನ್ನುವ ದುಗುಢ ಭಾವನೆಯಿಂದ ಇಂದಿನ ಯುವಜನತೆ ತಾವು ಮಾಡುವ ಕೆಲಸದಿಂದ ವಿಮುಖರಾಗುತ್ತಿದ್ದಾರೆ ಎಂದರು.

ಜತಗೆ ಸಲಹೆಯಾಗಿ ಅದರ ಬದಲು ಬೇರೆಯವರೊಂದಿಗೆ ಹೊಂದಾಣಿಕೆ ಮಾಡುವುದನ್ನು ನಿಲ್ಲಿಸಿ, ನಿಮಗೇ ನಿಮ್ಮದೇ ಅದ ಜೀವನವಿದೆ, ಕನಸಿದೆ. ಅದರೆಡೆಗೆ ಗಮನ ನೀಡಿ. ಪ್ರಪಂಚದಲ್ಲಿ ಅನೇಕ ಸಂಗತಿಗಳು ನಡೆಯುತ್ತಿರುತ್ತವೆ. ಅದನ್ನು ಚರ್ಚಿಸಿ. ನಿಮ್ಮ ಕನಸಿಗೆ ನೀವೇ ಧ್ವನಿಯಾಗಬೇಕು. ನನ್ನನ್ನು ನಾನು ಹೆಚ್ಚು ನಂಬುತ್ತೇನೆ ಅದರಿಂದಲೇ ನಾನು ಇಂದು ಈ ಸ್ಥಾನದಲ್ಲಿದ್ದೇನೆ ಎಂದು ಸಲಹೆ ನೀಡುವ ಮೂಲಕ ತೀರ್ಪುಗಾರರ ಪ್ರಶ್ನೆಗೆ ಹರ್ನಾಜ್ ಸಂಧು ಉತ್ತರಿಸಿದ್ದಾರೆ.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!