Thursday, May 16, 2024
spot_imgspot_img
spot_imgspot_img

ಮುಂದಿನ ಎರಡು ತಿಂಗಳ ಕಾಲ ಕೇರಳ ಪ್ರವೇಶ ಹಾಗೂ ಆಗಮನ ಸಂಪೂರ್ಣ ನಿರ್ಬಂಧ; ಜಿಲ್ಲಾಧಿಕಾರಿ ಆದೇಶ!

- Advertisement -G L Acharya panikkar
- Advertisement -

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಹರಡುತ್ತಿರುವ ಪರಿಣಾಮ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಮುಂದಿನ ಎರಡು ತಿಂಗಳ ಕಾಲ ಸಂಪೂರ್ಣವಾಗಿ ನಿರ್ಬಂಧಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಅಕ್ಟೋಬರ್ ಅಂತ್ಯದವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗಲೇ ಕೇರಳದಲ್ಲಿದ್ದವರಿಗೆ ಆಯಾಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳುವ ಉದ್ದೇಶ ಇದ್ದವರು ಕೂಡ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಅಲ್ಲದೆ, ಆಸ್ಪತ್ರೆಗಳು, ನರ್ಸಿಂಗ್ ಹೋ ಮ್ ಗಳು, ಕಚೇರಿಗಳು, ಹೊಟೇ ಲ್ ಗಳು, ಕೈಗಾರಿಕೆಗಳು ಎಲ್ಲಾ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬ್ಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಪ್ರವೇಶ ಮಾಡದಂತೆ ಸೂಚಿಸಿದ್ದಾರೆ. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲೀಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದೇ ಇದ್ದಲ್ಲಿ ಅಕ್ಟೋಬರ್ ಅಂತ್ಯದವರೆಗೆ ಕೇರಳರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

- Advertisement -

Related news

error: Content is protected !!