Thursday, May 2, 2024
spot_imgspot_img
spot_imgspot_img

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

- Advertisement -G L Acharya panikkar
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತನ ವಿರುದ್ಧ ಚಿಕ್ಕಮಗಳೂರಿನಲ್ಲಿ ದೂರು ದಾಖಲಾಗಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ತಿಥಿ ಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಅವರ ಅಭಿಮಾನಿಗಳು ನೀಡಿದ ದೂರಿನ ಅನ್ವಯ ಪ್ರಜ್ವಲ್ ವಿರುದ್ಧ ಚಿಕ್ಕಮಗಳೂರು  ಸೆನ್ ಪೊಲೀಸ್ ಠಾಣೆ ಹಾಗೂ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿದ್ದರಾಮಯ್ಯ ಅವರ ತಿಥಿ ಕಾರ್ಡ್ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ರಚಿಸಿ ಫೇಸ್​ಬುಕ್ ಮತ್ತು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮೂಡಿಗೆರೆ ಪಟ್ಟಣದ ಪ್ರಜ್ವಲ್ ಹಂಚಿಕೊಂಡಿದ್ದು, ಇದನ್ನು ಗಮನಿಸಿದ ಸಿದ್ದರಾಮಯ್ಯ ಅಭಿಮಾನಿಗಳ ಬಳಗವು ಪ್ರಜ್ವಲ್ ವಿರುದ್ಧ ಸೆನ್ ಪೊಲೀಸ್ ಠಾಣೆ ಮತ್ತು ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದೆ.

- Advertisement -

Related news

error: Content is protected !!