Friday, April 26, 2024
spot_imgspot_img
spot_imgspot_img

ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ದಿವಂಗತ ಮುತ್ತಪ್ಪ ರೈ ಒಡೆತನ ಮತ್ತು ಪಾಲುದಾರಿಕೆಯಲ್ಲಿರುವ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಗಳನ್ನು ಮಾರಾಟ ಮಾಡದಂತೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ರೈ ಅವರನ್ನು ರಿಜಿಸ್ಟರ್ಡ್ ವಿವಾಹವಾಗಿರುವ ಅನುರಾಧ ಮುತ್ತಪ್ಪ ರೈ ಸಲ್ಲಿಸಿದ ಅರ್ಜಿಯನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ರೈ ಪುತ್ರರಾದ ರಾಕಿ ರೈ ಮತ್ತು ರಿಕ್ಕಿ ರೈ ಸಹಿತ 20 ಮಂದಿಯನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.

vtv vitla

ಮುತ್ತಪ್ಪ ರೈ ಒಡೆತನದ ಆಸ್ತಿಯಲ್ಲಿ ಮೂರನೇ ಒಂದು ಪಾಲು ನೀಡುವಂತೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅನುರಾಧ ಕೇಸು ದಾಖಲಿಸಿದ್ದರು. ಇದರೊಂದಿಗೆ 700 ಪುಟಗಳ ದಾಖಲೆಗಳನ್ನು ಸಲ್ಲಿಸಲಾಗಿತ್ತು. ಈ ಸಂಬಂಧ 17 ಮಂದಿಗೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

Muthappa Rai Unseen Photos

ಈ ಕುರಿತು ಮುತ್ತಪ್ಪ ರೈ ಪುತ್ರರು ಕಾನೂನು ಹೋರಾಟ ಮುಂದುವರಿಸಿದ್ದರು.ಆ ಬಳಿಕ ತಡೆಯಾಜ್ಞೆ ತೆರವುಗೊಂಡಿತ್ತು. ಇದೀಗ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ಮುತ್ತಪ್ಪ ರೈ ಒಡೆತನ ಮತ್ತು ಪಾಲುದಾರಿಕೆಯ ಎಲ್ಲಾ ಆಸ್ತಿಗಳನ್ನು ಮಾರಾಟ ಮಾಡದಂತೆ ನ್ಯಾಯಾಲಯ ತಡೆ ಯಾಜ್ಞೆ ನೀಡಿದೆ. ಅನುರಾಧ ಪರವಾಗಿ ಹಿರಿಯ ನ್ಯಾಯವಾದಿ ಬಿ.ವಿ. ಆಚಾರ್ಯ ವಾದಿಸುತ್ತಿದ್ದಾರೆ. ಮುಂದಿನ ವಿಚಾರಣೆ ಜನವರಿ 11ರಂದು ನಡೆಯಲಿದೆ.

vtv vitla
vtv vitla
- Advertisement -

Related news

error: Content is protected !!