Tuesday, April 30, 2024
spot_imgspot_img
spot_imgspot_img

ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಬಂಧನ; ಎದೆನೋವು ಕಾಣಿಸಿಕೊಂಡ ಕಾರಣ ಕಾರಾಗೃಹದಿಂದ ಆಸ್ಪತ್ರೆಗೆ ಶಿಫ್ಟ್‌

- Advertisement -G L Acharya panikkar
- Advertisement -

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಪೊಲೀಸರು ಶ್ರೀಗಳನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ. ಮುರುಘಾ ಮಠದಲ್ಲೇ ಶಿವಮೂರ್ತಿ ಶ್ರೀಗಳ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣ ದಾಖಲಾಗಿ ಏಳು ದಿನಗಳ ಬಳಿಕ ಶ್ರೀಗಳನ್ನು ಬಂಧಿಸಲಾಗಿದೆ. ಮುರುಘಾ ಶ್ರೀ ಬಂಧನಕ್ಕೆ ಹೆಚ್ಚಿದ ಒತ್ತಡದಿಂದ ಪೊಲೀಸರು ಬಂಧಿಸಿದ್ದು, ಶ್ರೀಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗಳ ಬಂಧನದ ವೇಳೆ ನಗರದ ಜಿಲ್ಲಾಧಿಕಾರಿ ಕಚೇರಿ ವೃತ್ತ ಬಳಿ ಬ್ಯಾರಿಕೇಡ್‌ ಹಾಕಲಾಗಿದೆ. ಜೊತೆಗೆ ನಗರದ ಹಲವು ಕಡೆಗಳಲ್ಲಿಯೂ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ಇದರ ಜೊತೆಗೆ ಭದ್ರತೆಗಾಗಿ ಹೆಚ್ಚಿನ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಆರೋಪ, ಪೋಕ್ಸೊ ಹಾಗೂ ಸುಮೋಟೋ ಪ್ರಕರಣಗಳನ್ನು ಎದುರಿಸುತ್ತಿದ್ದು, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ.

ಎದೆನೋವು ಜೈಲಿನಿಂದ ಆಸ್ಪತ್ರೆಗೆ ದಾಖಲು

ಬಂಧನ ಹಿನ್ನಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ರಾತ್ರಿ 2 ಗಂಟೆ ಸುಮಾರಿಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದರು. ಬಳಿಕ ಶ್ರೀಗಳನ್ನು ಚಿತ್ರದುರ್ಗದ ಕಾರಾಗೃಹಕ್ಕೆ ರವಾನಿಸಲಾಗಿತ್ತು. ವಿಚಾರಣಾಧೀನ ಕೈದಿಯಾಗಿದ್ದ ಮುರುಘಾ ಶಿವಮೂರ್ತಿ ಶರಣರಿಗೆ ಶ್ರೀಗಳನ್ನು ಸಾಮಾನ್ಯ ಬ್ಯಾರಕ್ ನಲ್ಲಿ ಇರಿಸಲಾಗಿದ್ದು, ಕೈದಿಯಾಗಿ 2261 ಸಂಖ್ಯೆ ನೀಡಲಾಗಿದೆ. ಆದರೆ ಶ್ರೀಗಳಿಗೆ ಇಂದು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುರುಘಾ ಮಠದ ಶ್ರೀಗಳನ್ನು ಜೈಲಿನಿಂದ ಆಸ್ಪತ್ರೆಗೆ ರವಾನಿಸಲಾಗಿದೆ.

ಮುರುಘಾಮಠದ ಶ್ರೀಗಳ ಬಂಧನದ ಕುರಿತಂತೆ ಪ್ರತಿಕ್ರಿಯೆ ಮಠದ ಪರ ವಕೀಲ ಉಮೇಶ್, “ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿಲ್ಲ. ಕಾನೂನಿಗೆ ಗೌರವ ನೀಡಲೆಂದು ಸ್ವಾಮೀಜಿಯೇ ಪೊಲೀಸರಿಗೆ ಶರಣಾಗಿದ್ದಾರೆ. ಮಹಿಳಾ ವಾರ್ಡನ್​ ಹೇಳಿಕೆಯ ಆಧಾರದ ಮೇಲೆ ಬಂಧನ ಆಗಿಲ್ಲ. ಬೇರೆ ಪ್ರಕರಣದ ವಿಚಾರವಾಗಿ ಮಹಿಳಾ ವಾರ್ಡನ್ ವಿಚಾರಣೆ ನಡೆದಿದೆ.

ಶ್ರೀಗಳಿಗೆ ಜಾಮೀನು ಕೋರಿ ಇಂದು ಕೋರ್ಟ್​ಗೆ ಮತ್ತೆ ಅರ್ಜಿ ಸಲ್ಲಿಸುತ್ತೇವೆ. ನಾವು ನಿನ್ನೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ರದ್ದಾಗಿದೆ. ಇಂದು ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ. ಮುರುಘಾ ಶ್ರೀಗಳಿಗೆ ಗೆದ್ದು ಬರುವ ವಿಶ್ವಾಸ ಇದೆ “ಎಂದು ಅವರು ಹೇಳಿದ್ದಾರೆ.

- Advertisement -

Related news

error: Content is protected !!