Sunday, April 28, 2024
spot_imgspot_img
spot_imgspot_img

ಮುರುಘಾ ಶ್ರೀಗಳಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ

- Advertisement -G L Acharya panikkar
- Advertisement -
astr

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀಗಳಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಮುರುಘಾ ಶರಣರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 27 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮುರುಘಾ ಶರಣ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಕೊನೆಯ ದಿನವಾಗಿದ್ದು, ಇಂದು ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ಇತ್ತು. ಕೋರ್ಟ್ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

- Advertisement -

Related news

error: Content is protected !!