Friday, April 26, 2024
spot_imgspot_img
spot_imgspot_img

ಮೆಲ್ಕಾರ್ : ಮಹಿಳಾ ಕಾಲೇಜು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

- Advertisement -G L Acharya panikkar
- Advertisement -

ಮೆಲ್ಕಾರ್‌: ಶಿಕ್ಷಣದಿಂದ ವ್ಯಕ್ತಿತ್ವ ವಿಕಸನದ ಜೊತೆಗೆ ಸಂಪತ್ಭರಿತ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಕಲ್ಲಿಕೋಟೆ ಹಾಗೂ ಕಣ್ಣೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪ ಕುಲಪತಿ ಎಂ.ಅಬ್ದುಲ್‌ ರಹಿಮಾನ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌ ಅಭಿಪ್ರಾಯಪಟ್ಟರು.

ಮೆಲ್ಕಾರ್ ಮಹಿಳಾ ಕಾಲೇಜಿನ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಭವಿಷ್ಯವನ್ನು ಗುರಿಯಾಗಿಸಿಕೊಂಡು ಜಾಗತಿಕ ಮಟ್ಟದ ಸ್ಪರ್ಧಾತ್ಮಕತೆ ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಶುಭ ಹಾರೈಸಿದರು. ಪ್ರಾಂಶುಪಾಲ ಬಿ.ಕೆ.ಅಬ್ದುಲ್ ಲತೀಫ್ ಉಪಸ್ಥಿತರಿದ್ದರು.

2021-22 ನೇರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿನಲ್ಲಿ ಅತ್ಯಧಿಕ ಅಂಕ ಗಳಿಸಿದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ನಫೀಸಾ ಶಹಬಾ, ಫಾತಿಮಾ ಆಫಿಯಾ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಅಶ್ಬಾವುನ್ನೀಸಾ, ಚೈತ್ರಾ, ಕಲಾ ವಿಭಾಗದ ವಿದ್ಯಾರ್ಥಿಗಳಾದ ನಿಶತ್ ಫಾತಿಮಾ, ಸೌಲತ್ ನಿಶಾ ಇವರನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳಾದ ಹವ್ವಾ ನೌಫ ಸ್ವಾಗತಿಸಿ, ಫಿದಾ ನಹೀಮ ವಂದಿಸಿದರು. ಝಿಯಾ ಖಾಶಿಫಾ ಕಾರ್ಯಕ್ರಮ ನಿರೂಪಿಸಿದರು.

vtv vitla
- Advertisement -

Related news

error: Content is protected !!