Thursday, April 25, 2024
spot_imgspot_img
spot_imgspot_img

ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ; ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ

- Advertisement -G L Acharya panikkar
- Advertisement -
vtv vitla
vtv vitla

ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಕರ್ನಾಟಕ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರದ ಸಿ.ಎಸ್‌. ರವಿಕುಮಾರ್ ಈ ಆದೇಶ ಹೊರಡಿಸಿದ್ದಾರೆ. ಪಾದಯಾತ್ರೆಯ ವಾಹನ, ಜನರ ಸಂಚಾರ ನಿಷೇಧಕ್ಕೆ ಆದೇಶ ಹೊರಡಿಸಲಾಗಿದೆ. ರಾಮನಗರ ಜಿಲ್ಲಾಧಿಕಾರಿ, ಎಸ್​.ಪಿ. ಮೂಲಕ ಪಾದಯಾತ್ರೆಗೆ ಬ್ರೇಕ್ ಹಾಕಲು ತೀರ್ಮಾನಿಸಲಾಗಿದೆ.

vtv vitla
vtv vitla

ಸರ್ಕಾರದ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಹೈಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಬೇಕಿರುವ ಹಿನ್ನೆಲೆ, ಮತ್ತೊಂದು ‌ಸೂಚನೆ ನೀಡುವ ಸಲುವಾಗಿ ನಿಷೇಧ ಹೇರಲಾಗಿದೆ.

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ಆಕ್ಷೇಪ ಹಿನ್ನೆಲೆ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ. ದೂರವಾಣಿ ಮೂಲಕ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ‌, ಸಚಿವರಾದ ಆರಗ ಜ್ಞಾನೇಂದ್ರ, ಜೆ.ಸಿ.ಮಾಧುಸ್ವಾಮಿ, ಆರ್‌.ಅಶೋಕ್, ಡಾ.ಸುಧಾಕರ್, ಸಿಎಸ್ ರವಿಕುಮಾರ್, ಡಿಜಿ ಮತ್ತು ಐಜಿಪಿ ಸೂದ್, ಎಜಿ ನಾವದಗಿ ಜತೆ ಸಿಎಂ ಚರ್ಚೆ ಮಾಡಿದ್ದಾರೆ.

ಸರ್ಕಾರದ ಮುಂದಿನ ನಿಲುವಿನ ಬಗ್ಗೆ ಬೊಮ್ಮಾಯಿ ಚರ್ಚಿಸಿದ್ದು ಸಾಂಕ್ರಾಮಿಕ ರೋಗಗಳ ಕಾಯ್ದೆಯನ್ವಯ ಕ್ರಮದ ಬಗ್ಗೆ ಮಾತುಕತೆ ನಡೆಸಲಾಗಿದೆ. ಕ್ರಮಕೈಗೊಳ್ಳುವ ವಿಚಾರವಾಗಿ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.

suvarna gold
- Advertisement -

Related news

error: Content is protected !!