Wednesday, June 24, 2026
spot_imgspot_img
spot_imgspot_img

ಮೇ 16ರಂದು ಪ್ರಧಾನಿ ನರೇಂದ್ರ ಮೋದಿ ನೇಪಾಳ ಪ್ರವಾಸ

- Advertisement -
- Advertisement -

ನವದೆಹಲಿ; ಯುರೋಪ್ ದೇಶಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾತ್ರಿ ದೆಹಲಿಗೆ ವಾಪಸ್ ಆಗಲಿದ್ದಾರೆ. ಮೇ 16ರಂದು ಅವರು ನೇಪಾಳ ಪ್ರವಾಸ ಕೈಗೊಂಡಿದ್ದಾರೆ.

ಗೌತಮ ಬುದ್ಧನ ಜನ್ಮಸ್ಥಳ ಲುಂಬಿನಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ನೇಪಾಳ ಪ್ರವಾಸಕ್ಕೆ ತೆರಳುತ್ತಿದ್ದಾರೆ. ನೇಪಾಳದ ಪ್ರಧಾನ ಮಂತ್ರಿಗಳ ಕಚೇರಿ ಮೋದಿ ಭೇಟಿ ಬಗ್ಗೆ ಮಾಹಿತಿ ನೀಡಿದೆ.

ಮೇ ತಿಂಗಳಿನಲ್ಲಿ ನರೇಂದ್ರ ಮೋದಿ ಮೂರು ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಯುರೋಪಿಯನ್ ದೇಶಗಳು, ನೇಪಾಳದ ಬಳಿಕ ಮೇ 23, 24ರಂದು ಮೋದಿ ಜಪಾನ್ ಪ್ರವಾಸ ಕೈಗೊಳ್ಳಲಿದ್ದಾರೆ.

ನೇಪಾಳದಲ್ಲಿ ನರೇಂದ್ರ ಮೋದಿ ಕೆಲವು ಗಂಟೆಗಳ ಕಾಲ ಮಾತ್ರ ಇರಲಿದ್ದಾರೆ. ಲುಂಬಿನಿಗೆ ಭೇಟಿ ನೀಡಿ ಅಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗಲಿದ್ದಾರೆ.

- Advertisement -

Related news

error: Content is protected !!