Saturday, May 18, 2024
spot_imgspot_img
spot_imgspot_img

ಮೇ.16 ರಂದು ಶಾಲೆ ಪ್ರಾರಂಭ ಯಾವುದೇ ಬದಲಾವಣೆ ಇಲ್ಲ; ಬಿ.ಸಿ ನಾಗೇಶ್ ಸ್ಪಷ್ಟನೆ

- Advertisement -G L Acharya panikkar
- Advertisement -

ಬಂಟ್ವಾಳ: ಮೇ 16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

bc nagesh: ಹಿಜಾಬ್ ಅಲ್ಲ, ಕೇಸರಿ-ಹಸಿರು ಶಾಲು ಧರಿಸಿ ಬಂದರೂ ತರಗತಿಗೆ ಪ್ರವೇಶವಿಲ್ಲ;  ಬಿ.ಸಿ ನಾಗೇಶ್ - in mysuru education minister bc nagesh given statement about  hijab and saffron shawl controversy ...

16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. 9 ತಿಂಗಳನ್ನು ಮೂರು ಭಾಗಗಳನ್ನಾಗಿ ಮಾಡಿ ಕಲಿಕೆ ಮಾಡಲಾಗುವುದು. ರಾಜ್ಯದ ಎಲ್ಲ ಶಾಲೆಗಳಲ್ಲಿ ವಾರಕ್ಕೊಂದು ದಿನ ನೈತಿಕ ಶಿಕ್ಷಣ ಜಾರಿಗೊಳಿಸುವ ಚಿಂತನೆ ಇದೆ. ಮಕ್ಕಳನ ವಿಕಸನಕ್ಕಾಗಿ ಏಕರೂಪ ಭಾರತೀಯ ಶಿಕ್ಷಣ ನೀತಿಯನ್ನು 1 ಮತ್ತು 2 ನೇ ತರಗತಿಗಳಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಎಸ್ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆ ಸೂಸೂತ್ರವಾಗಿ ಪೂರ್ಣಗೊಂಡಿದ್ದು, ಮೇ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!