Sunday, August 30, 2026
spot_imgspot_img
spot_imgspot_img

ಮೈಸೂರು: ಕುರಿ ಮೇಯಿಸುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಆರೋಪಿಗಳ ಪೈಕಿ ಓರ್ವನ ಬಂಧನ

- Advertisement -
- Advertisement -

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿ ಮೇಯಿಸುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ವರದಿಯಾಗಿದೆ.

ಏಪ್ರಿಲ್ 11ರಂದು ಮಹಿಳೆಯನ್ನು ಬಲವಂತವಾಗಿ ಪೊದೆಯೊಳಗೆ ಎಳೆದೊಯ್ದು ಮೂವರು ಗ್ಯಾಂಗ್‌ರೇಪ್ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ನಂತರ ಹೆದರಿದ್ದ ಬಾಧಿತ ಮಹಿಳೆ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದರು.

ಬಳಿಕ, 2 ದಿನಗಳ ಬಳಿಕ ಸಾಮೂಹಿಕ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಸಂತ್ರಸ್ತೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದೊಡ್ಡಕವಲಂದೆ ಠಾಣೆ ಪೊಲೀಸರು ಮೂವರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

- Advertisement -

Related news

error: Content is protected !!