Wednesday, April 24, 2024
spot_imgspot_img
spot_imgspot_img

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಬಂಧಿತ 5 ಆರೋಪಿಗಳ ಪೈಕಿ ಮೂವರ ಹೆಸರು ಬಹಿರಂಗ

- Advertisement -G L Acharya panikkar
- Advertisement -

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಮಹತ್ವದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

“ಬಂಧಿತ ಆರೋಪಿಗಳು ದರೋಡೆ ಮಾಡಲು ಹೋಗಿ ಯುವಕ ಹಾಗೂ ಯುವತಿ ಬಳಿ ಏನೂ ಸಿಗದಿದ್ದಾಗ ಯುವತಿಯನ್ನು ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ. ಅತ್ಯಾಚಾರ ಸಂತ್ರಸ್ತೆಯನ್ನು ಹೆದರಿಸಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ದರೋಡೆಗೆ ಪ್ರಯತ್ನಿಸಿ ನಂತರ ಅತ್ಯಾಚಾರ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು. ಈ ಪೈಕಿ ಒಬ್ಬ ಬಾಲಾಪರಾಧಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಬಲ್ಲ ಮೂಲಗಳ ಪ್ರಕಾರ, ಆರೋಪಿಗಳ ಹೆಸರು ಈಗ ಬಹಿರಂಗವಾಗಿದೆ. ಬಂಧಿತ 5 ಆರೋಪಿಗಳ ಪೈಕಿ ಮೂವರ ಹೆಸರು ಬಹಿರಂಗವಾಗಿದೆ. ಅರವಿಂದ್, ಪೆರುಮಾಳ್, ಮೂರ್ತಿ ಸೇರಿದಂತೆ ಇನ್ನಿಬ್ಬರನ್ನು ಬಂಧಿಸಿದ್ದಾರೆ. ಓರ್ವ ತಲೆ ಮರೆಸಿಕೊಂಡಿದ್ದಾಗಿ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!