Friday, April 26, 2024
spot_imgspot_img
spot_imgspot_img

ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

- Advertisement -G L Acharya panikkar
- Advertisement -

ಮೈಸೂರು: ಟ್ರಾಕ್ಟರ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಿರಿಯಾಪಟ್ಟಣ ಠಾಣಾ ವ್ಯಾಪ್ತಿಯ ಮೈಸೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

ಟ್ರಾಕ್ಟರ್ ಮೈಸೂರಿನಿಂದ ಪಿರಿಯಾಪಟ್ಟಣ ಕಡೆ ಬರುತ್ತಿದ್ದ ವೇಳೆ ಟ್ರಾಕ್ಟರ್ ಚಾಲಕ ಟ್ರಾಕ್ಟರನ್ನು ರಸ್ತೆಯ ಬಲ ಕಡೆಗೆ ತಿರುಗಿಸಿದ ವೇಳೆ ಹಿಂಬದಿಯಿಂದ ಬರುತ್ತಿದ್ದ ಬೈಕ್ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ರಸ್ತಗೆಸೆಯಲ್ಪಟ್ಟು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದು, ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ.

- Advertisement -

Related news

error: Content is protected !!