Saturday, June 6, 2026
spot_imgspot_img
spot_imgspot_img

ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ 4.15 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

- Advertisement -
- Advertisement -

ದಾವಣಗೆರೆ: ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು.

ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ ಎಸ್‌ಎಂಎಸ್ ಬಂದಿದೆ. ಬ್ಯಾಂಕ್ ನ ಅಪ್ಲಿಕೇಷನ್ ಅಪ್‌ಡೇಟಿಗೆ ಸೂಚಿಸಲಾಗಿದೆ. ಅದರಂತೆ ಲಿಂಕ್ ಒತ್ತಿದಾಗ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.

ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಈ ಕುರಿತು ಬುಧವಾರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!