- Advertisement -
- Advertisement -

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹಬ್ಬುವಾಡದಲ್ಲಿ ಮೊಬೈಲ್ ಹೆಚ್ಚು ಬಳಸದಂತೆ ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಮೇಘ (20) ಎಂದು ಗುರುತಿಸಲಾಗಿದೆ.
ಮೃತ ಯುವತಿಯ ಕುಟಂಬ ಮೂಲತಃ ಸಿದ್ದಾಪುರ ತಾಲ್ಲೂಕಿನವರಾಗಿದ್ದು, ಕಾರವಾರದ ಹುಬ್ಬುವಾಡದಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬಸ್ಥರು ವಾಸವಾಗಿದ್ದರು.

ಇನ್ನುಈ ಘಟನೆ ಕುರಿತಂತೆ ಕಾರವಾರ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


- Advertisement -








