Friday, May 3, 2024
spot_imgspot_img
spot_imgspot_img

ಮೊಬೈಲ್ ಮಳಿಗೆಯಲ್ಲಿ ಬೆಂಕಿ ಅನಾಹುತ; ಲಕ್ಷಾಂತರ ಮೌಲ್ಯದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿ!

- Advertisement -G L Acharya panikkar
- Advertisement -

ಕೊಡಗು: ಮೊಬೈಲ್ ಮಳಿಗೆಯೊಂದರಲ್ಲಿ ಭಾರೀ ಅಗ್ನಿ ಅವಗಡ ಸಂಭವಿಸಿದ್ದು, ಲಕ್ಷಾಂತರ ರೂ. ಬೆಲೆ ಬಾಳುವ ವಸ್ತುಗಳು ಸುಟ್ಟು ಭಸ್ಮವಾಗಿರೋ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿನ ಪೂರ್ವಿಕಾ ಮೊಬೈಲ್ ಮಳಿಗೆಯಲ್ಲಿ ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಭಾರೀ ಅಗ್ನಿ ಅವಗಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ತಂಡದ ಅಧಿಕಾರಿಗಳು 2 ಗಂಟೆಗೂ ಹೆಚ್ಚುಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ. ಮಳಿಗೆಯಲ್ಲಿದ್ದಂತ ಮೊಬೈಲ್ ಸೇರಿದಂತೆ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಭಸ್ಮಗೊಂಡಿವೆ. ಈ ಘಟನೆಯ ಬಗ್ಗೆ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!