Thursday, July 23, 2026
spot_imgspot_img
spot_imgspot_img

ಮೋದಿ ಜೊತೆಗೆ ಔತಣಕೂಟದಲ್ಲಿ ಯಶ್, ರಿಷಬ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾಗಿ; ಕಾಂತಾರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ

- Advertisement -
- Advertisement -

ಬೆಂಗಳೂರು : ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ (ಫೆ 12) ಬೆಂಗಳೂರಿನ ರಾಜಭವನದಲ್ಲಿ ತಂಗಿದ್ದ ವೇಳೆ ದಿಗ್ಗಜ ನಟರು, ನಿರ್ಮಾಪಕರು ಕ್ರಿಕೆಟ್ ರಂಗದ ತಾರೆಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ವಿಶೇಷವಾಗಿ ಕಾಂತಾರ ಚಿತ್ರದ ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ರಾಕಿಂಗ್ ಸ್ಟಾರ್ ಯಶ್, ಅಶ್ವಿನಿ ಪುನೀತ್ ರಾಜ್ ಕುಮಾರ್, ನಟಿ ಶ್ರದ್ದಾ ಅವರನ್ನು ಔತಣ ಕೂಟಕ್ಕೆ ಆಹ್ವಾನಿಸಿದ್ದರು.

“ಸ್ಫೂರ್ತಿದಾಯಕ ಭೇಟಿ ಪ್ರಧಾನಿ ನರೇಂದ್ರ ಮೋದಿ ಅವರು ನವ ಭಾರತ ಮತ್ತು ಪ್ರಗತಿಪರ ಕರ್ನಾಟಕವನ್ನು ರೂಪಿಸುವಲ್ಲಿ ಮನರಂಜನಾ ಉದ್ಯಮದ ಪಾತ್ರವನ್ನು ನಾವು ಚರ್ಚಿಸಿದ್ದೇವೆ. ಉತ್ತಮ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಲು ಹೆಮ್ಮೆ ಪಡುತ್ತೇನೆ. ನಿಮ್ಮ ದೂರದೃಷ್ಟಿಯ ನಾಯಕತ್ವವು ನಮಗೆ ಸ್ಫೂರ್ತಿ ನೀಡುತ್ತದೆ ಮತ್ತು ನಿಮ್ಮ ಪ್ರೋತ್ಸಾಹ ಜಗತ್ತೇ ನಮ್ಮೊಂದಿಗೆ ಇದ್ದ ಹಾಗೆ” ಎಂದು ಹೊಂಬಾಳೆ ಫಿಲ್ಡ್ ಪರ ನಿರ್ಮಾಪಕ ವಿಜಯ್ ಕಿರಗಂದೂರು ಟ್ವಿಟ್ ಮಾಡಿದ್ದಾರೆ.

- Advertisement -

Related news

error: Content is protected !!