Tuesday, July 1, 2025
spot_imgspot_img
spot_imgspot_img

ಮೋಸ್ಟ್ ವಾಂಟೆಡ್ ಉಗ್ರ ಸಲೀಂ ಪರ್ರೇಯನ್ನು ಹತ್ಯೆಗೈದ ಸೇನೆ

- Advertisement -
- Advertisement -

ಶ್ರೀನಗರ: ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಂಟೆಡ್ ಉಗ್ರ ಸಲೀಂ ಪರ್ರೆಯನ್ನು ಹೊಡೆದುರುಳಿಸಿರುವ ಘಟನೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ನಡೆದಿದೆ.

ಕಾಶ್ಮೀರ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಉಗ್ರ ಹಾಗೂ ಲಷ್ಕರ್-ಎ-ತೊಯ್ಬಾ ಕಮಾಂಡರ್ ಸಲೇಂ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದು, ಉಗ್ರರ ಅಡಗಿರುವ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರನ್ನು ಸುತ್ತುವರೆದಾಗ ತಪ್ಪಿಸಿಕೊಳ್ಳಲು ಉಗ್ರರು ಗುಂಡಿನ ದಾಳಿ ಅನ್ಡೆಸಿದ್ದು, ಈ ವೇಳೆ ಸೇನೆ ಪ್ರತಿದಾಳಿ ಮಾಡಿದ್ದು, ದಾಳಿಯಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಹಾಗೂ ಲಷ್ಕರ್-ಎ-ತೊಯ್ಬಾ ಕಮಾಂಡರ್ ಸಲೇಂ ಪರ್ರೆ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

suvarna gold
- Advertisement -

Related news

error: Content is protected !!