Thursday, June 18, 2026
spot_imgspot_img
spot_imgspot_img

ಯುವತಿಗೆ ಪಿಸ್ತೂಲ್‌ ತೋರಿಸಿ ಅತ್ಯಾಚಾರ ಎಸಗಿದ ಬಾಡಿಗೆ ಮನೆ ಮಾಲೀಕ

- Advertisement -
- Advertisement -

ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆಯ ತಲೆಗೆ ಪಿಸ್ತೂಲಿಟ್ಟು ಮನೆ ಮಾಲೀಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಬೆಂಗಳೂರು ನಿವಾಸಿ ಅನಿಲ್ ರವಿಶಂಕರ್ ಪ್ರಸಾದ್ ಬಂಧಿತ ಆರೋಪಿ.

ಅನಿಲ್ ರವಿಶಂಕರ್ ಪ್ರಸಾದ್ ತನ್ನ ಮನೆಯಲ್ಲಿ ಬಾಡಿಗೆಗೆ ಇದ್ದ ಯುವತಿಯನ್ನು ಹೆದರಿಸಿ ಅತ್ಯಾಚಾರ ನಡೆಸಿದ್ದಾನೆ. ಕೃತ್ಯ ತಡವಾಗಿ ಬೆಳಕಿಗೆ ಬಂದಿದ್ದು, ಮನೆ ಮಾಲೀಕನನ್ನು ಅಶೋಕನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಹಾರದ ಆರೋಪಿಯು ಟೈಲ್ಸ್ ವ್ಯಾಪಾರ ಮಾಡಿಕೊಂಡು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾನೆ. ಈತನಿಗೆ ಸೇರಿದ ಮನೆಯಲ್ಲಿ ಪಶ್ಚಿಮ ಬಂಗಾಳದ ಯುವತಿ ಕಳೆದ ಮಾರ್ಚ್‌ನಿಂದ ಬಾಡಿಗೆಗೆ ವಾಸಿಸುತ್ತಿದ್ದಳು.

ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಂದಿಗೆ ಮನೆಗೆ ಆಗಾಗ ಸ್ನೇಹಿತರು ಬರುತ್ತಿರುವ ಬಗ್ಗೆ ಮನೆ ಮಾಲೀಕ ತಗಾದೆ ತೆಗೆಯುತ್ತಿದ್ದನಂತೆ. ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಏಪ್ರಿಲ್ 11ರಂದು ಆಕೆಯ ಮನೆಗೆ ಹೋದ ಮಾಲೀಕ ಮಾತನಾಡುವ ನೆಪದಲ್ಲಿ ತನ್ನ ಬಳಿಯಿದ್ದ ಲೈಸೆನ್ಸ್ ರಿವಾಲ್ವರ್ ತಲೆಗಿಟ್ಟು ತನ್ನೊಂದಿಗೆ ಸಹಕರಿಸುವಂತೆ ಒತ್ತಡ ಹೇರಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ನಡೆದಿದ್ದ ಕೃತ್ಯದ ಬಗ್ಗೆ ಇತ್ತೀಚೆಗೆ ಪೋಷಕರ ಬಳಿ ಯುವತಿ ಹೇಳಿಕೊಂಡಿದ್ದಾಳೆ. ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!