Thursday, March 28, 2024
spot_imgspot_img
spot_imgspot_img

ಯುವತಿ ಮೇಲೆ ಅತ್ಯಾಚಾರ, ಜೀವ ಬೆದರಿಕೆ ಆರೋಪ : ಪೊಲೀಸಪ್ಪ ಸಸ್ಪೆಂಡ್‌

- Advertisement -G L Acharya panikkar
- Advertisement -

ಚಿತ್ರದುರ್ಗ: ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಳ್ಳಕೆರೆ ಸಿಪಿಐ ಉಮೇಶ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಳು. ಇದೀಗ ಈಕೆ ಸೋದರ ಮಾವನ ಮಗನಾಗಿರುವ ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. 5 ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಳು.

ಆತ ಕರೆದಾಗ ಹೋಗದಿದ್ದಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದ್ದಾರೆ. ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪವೂ ಕೇಳಿಬಂದಿದೆ. ಆರೋಪಿ ಇನ್ಸ್‌ಸೆಕ್ಟರ್‌ಗೆ ಈಗಾಗಲೆ ಇಬ್ಬರು ಪತ್ನಿಯರಿದ್ದಾರೆ.

ಇದೀಗ ಘಟನೆ ಸಂಬಂಧ ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ, ಜೀವ ಬೆದರಿಕೆ ಆರೋಪ, ಸಿಪಿಐ ಉಮೇಶ್ ಅಮಾನತುಗೊಳಿಸಿ ದಾವಣಗೆರೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!