Tuesday, June 23, 2026
spot_imgspot_img
spot_imgspot_img

ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಭೇಟಿಯಾದ ಪ್ರಧಾನಿ ಮೋದಿ

- Advertisement -
- Advertisement -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ರಷ್ಯಾದ ವಿದೇಶಾಂಗ ಸಚಿವ ಸೆರ್ಗಿ ಲಾವ್ರೊವ್ ಅವರನ್ನು ಭೇಟಿಯಾಗಿದ್ದು, ಸುಮಾರು 40 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಕಾರ್ಯಾಲಯದ ಪತ್ರಿಕಾ ಪ್ರಕಟಣೆಯ ಪ್ರಕಾರ, ಪ್ರಧಾನಿ ಮೋದಿ ಅವರು ಉಕ್ರೇನ್‌ನ ಪರಿಸ್ಥಿತಿಯ ಬಗ್ಗೆ ಲಾವ್ರೋವ್ ಅವರಿಗೆ ವಿವರಿಸುತ್ತಿದ್ದಂತೆ ಹಿಂಸಾಚಾರವನ್ನ ಕೊನೆಗೊಳಿಸಲು ಕರೆ ನೀಡಿದರು.

ಇನ್ನು ಹಿಂಸಾಚಾರವನ್ನ ಶೀಘ್ರವಾಗಿ ನಿಲ್ಲಿಸಬೇಕೆಂಬ ತಮ್ಮ ಕರೆಯನ್ನ ಪ್ರಧಾನಿ ಪುನರುಚ್ಚರಿಸಿದ್ದು, ಶಾಂತಿ ಪ್ರಯತ್ನಗಳಿಗೆ ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಭಾರತ ಸಿದ್ಧವಿದೆ ಎಂದು ತಿಳಿಸಿರುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!