Thursday, October 1, 2026
spot_imgspot_img
spot_imgspot_img

ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕ್ ಡಿಕ್ಕಿ; ದಾರುಣ ಸಾವು!

- Advertisement -
- Advertisement -

ಕಾಸರಗೋಡು: ಇಲ್ಲಿನ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟಿದ್ದು , ಈ ವೇಳೆ ಗೂಡ್ಸ್ ಆಟೊದಡಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತ ಬಾಲಕ ಚುಳ್ಳಿಕರೆಯ ಬಿಜು ಎಂಬವರ ಪುತ್ರ ಆಶಿಲ್(15) ಎಂದು ತಿಳಿದುಬಂದಿದೆ.

ಕಳೆದ ರಾತ್ರಿ ಮನೆ ಸಮೀಪದ ಅಂಗಡಿಗೆ ತೆರಳಲು ಬಾಲಕ ರಸ್ತೆ ದಾಟುತ್ತಿದ್ದಾಗ ಅತೀ ವೇಗದಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ಆಶಿಲ್ ದೇಹದ ಮೇಲೆ ಗೂಡ್ಸ್ ಆಟೋ ಹರಿದು,ಆತ ಗಂಭೀರವಾಗಿ ಗಾಯಗೊಂಡನು.

ಕೂಡಲೇ ಆತನನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!