Wednesday, May 8, 2024
spot_imgspot_img
spot_imgspot_img

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ; ಮುಂದಿನ ಚುನಾವಣೆಗೆ ಸಕಲ ಸಿದ್ಧತೆ

- Advertisement -G L Acharya panikkar
- Advertisement -

ಬೆಂಗಳೂರು : union minister amit shah :ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಈಗಿನಿಂದಲೇ ಸಕಲ ತಯಾರಿ ಮಾಡಿಕೊಳ್ತಿದೆ. ಮುಂದಿನ ಬಾರಿಯೂ ಅಧಿಕಾರ ಗದ್ದುಗೆಯನ್ನು ಉಳಿಸಿಕೊಳ್ಳಲೇಬೇಕು ಎನ್ನುವುದು ಬಿಜೆಪಿಯ ಹಠವಾಗಿದೆ . ಈ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್​ ಕೂಡ ರಣತಂತ್ರಗಳನ್ನು ರೂಪಿಸುತ್ತಿದೆ. ಈಗಾಗಲೇ ಬಿಜೆಪಿ ಚಾಣಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯಕ್ಕೆ ಆಗಮಿಸಿದ್ದು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ತಯಾರಿಗೆ ರಣಕಹಳೆ ಮೊಳಗಿಸಿದ್ದಾರೆ.

ಬೆಂಗಳೂರಿನ ಹೆಚ್​ಎಎಲ್​ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅಮಿತ್​ ಶಾರನ್ನು ಸಿಎಂ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು. ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಅನೇಕರು ಸಾಥ್​ ನೀಡಿದರು.

ಇನ್ನೂ ಒಂದು ವಿಶೇಷ ಅಂದರೆ ಕೇಂದ್ರ ಗೃಹ ಸಚಿವ ಅಮಿತ್​ಶಾರನ್ನು ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಳ್ಳುವುದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಮಾಜಿ ಸಿಎಂ ಯಡಿಯೂರಪ್ಪನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿ 1 ದಿನದ ಪ್ರವಾಸ ಕೈಗೊಂಡಿರುವ ಅಮಿತ್​ ಶಾ ಭೇಟಿಗೂ ಮುನ್ನ ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಜೊತೆಯಲ್ಲಿ 15 ನಿಮಿಷಗಳ ಕಾಲ ಚರ್ಚೆ ನಡೆಸಿರುವುದು ರಾಜಕೀಯ ದೃಷ್ಟಿಯಿಂದ ಮಹತ್ವದೆನಿಸಿದೆ.

ಇಂದು ಮಧ್ಯಾಹ್ನ ಸಿಎಂ ನಿವಾಸದಲ್ಲಿ ಕೇಂದ್ರ ಸಚಿವ ಅಮಿತ್​ ಶಾರಿಗೆ ಭೋಜನ ಕೂಟ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಈ ಔತಣ ಕೂಟಕ್ಕೆ ಯಡಿಯೂರಪ್ಪರನ್ನು ಆಹ್ವಾನಿಸುವ ನೆಪದಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿ ಬಳಿಕ ನೇರವಾಗಿ ಹೆಚ್​​ಎಎಲ್​ ವಿಮಾನ ನಿಲ್ದಾಣಕ್ಕೆ ತೆರಳಿದ ಸಿಎಂ ಬೊಮ್ಮಾಯಿ ಅಮಿತ್​ ಶಾರನ್ನು ಬರಮಾಡಿಕೊಂಡರು.

ಇಂದು ತಾಜ್​ ವೆಸ್ಟ್​ ಎಂಡ್ ಹೋಟೆಲ್​ನಲ್ಲಿ ಅಮಿತ್​ ಶಾ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಅಮಿತ್​ ಶಾ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಯಕರ ತಯಾರಿ ಯಾವ ರೀತಿಯಲ್ಲಿ ಇರಬೇಕು, ಯಾವುದೇ ವಿವಾದಗಳಿಂದ ಸರ್ಕಾರವು ಯಾವ ರೀತಿಯಲ್ಲಿ ಅಂತರ ಕಾಯ್ದುಕೊಳ್ಳಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

- Advertisement -

Related news

error: Content is protected !!