Thursday, April 18, 2024
spot_imgspot_img
spot_imgspot_img

ರಾಜ್ಯದಲ್ಲಿ ನಾಳೆಯಿಂದಲೇ ವೀಕೆಂಡ್ ಕರ್ಫ್ಯೂ ರದ್ದು..! ಕರ್ನಾಟಕದ ಜನತೆಗೆ ಬಿಗ್ ರಿಲೀಫ್

- Advertisement -G L Acharya panikkar
- Advertisement -
suvarna gold

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂಗೆ ಬಗ್ಗೆ ಅನೇಕರು ಆಕ್ಷೇಪ ವ್ಯಕ್ತ ಪಡಿಸಿದ್ದು, ಇದೀಗ ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ತೆರವು ಮಾಡಲು ಸಿಎಂ ಸಮ್ಮತಿಸಿದ್ದಾರೆ.

ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಕುರಿತ ತಜ್ಞರು, ಸಚಿವರ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಹಲವು ವಿಚಾರ ಚರ್ಚೆಯಾಗಿದ್ದು, ನೈಟ್ ಕರ್ಫ್ಯೂ ಮಂದುವರೆಯಲಿದೆ.

ಈ ಹಿಂದೆ ವೀಕೆಂಡ್, ನೈಟ್ ಕರ್ಫ್ಯೂಗೆ ಹಲವು ನಾಯಕರು, ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತು. ಈ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ತೆರವಿಗೆ ತಜ್ಞರು ಶಿಫಾರಸು ಮಾಡಿದ್ದರು. ಕೊವಿಡ್ ಕಡಿಮೆ ಇರುವ ಜಿಲ್ಲೆಗಳಲ್ಲಿ 50:50 ರೂಲ್ಸ್ ಮಾಡಿ. ಕೊವಿಡ್ ಹೆಚ್ಚಿರುವ ಕಡೆ ನಿರ್ಬಂಧ ಅಗತ್ಯ. ಬೆಂಗಳೂರು ನಗರದಲ್ಲಿ ಕೊವಿಡ್ ಪಾಸಿಟಿವಿಟಿ ದರ ಹೆಚ್ಚಿದೆ. ಅಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಟಿಎಸಿ ಅಧ್ಯಕ್ಷ ಡಾ.ಸುದರ್ಶನ್ ರಿಂದ ಸಭೆಯಲ್ಲಿ ವರದಿ ಸಲ್ಲಿಸಲಾಗಿತ್ತು.

- Advertisement -

Related news

error: Content is protected !!