Saturday, April 20, 2024
spot_imgspot_img
spot_imgspot_img

ರಾಜ್ಯದಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ;ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

- Advertisement -G L Acharya panikkar
- Advertisement -

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

- Advertisement -

Related news

error: Content is protected !!