Sunday, May 19, 2024
spot_imgspot_img
spot_imgspot_img

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆ; ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಹವಾಮಾನ ವೈಪರಿತ್ಯದಿಂದ ಒಂದೆಡೆ ವೈರಲ್ ಸೋಂಕು ಹರಡುತ್ತಿದೆ. ಮತ್ತೊಂದೆಡೆ ಮೊದಲ ಝೀಕಾ ವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನ ಆರೋಗ್ಯಸೌಧದಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ ಐದು ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ. ಪುಣೆ ವೈರಾಲಜಿ ಲ್ಯಾಬ್‌ನಿಂದ ಪಾಸಿಟಿವ್ ರಿಪೋರ್ಟ್‌ ಬಂದಿದೆ. ಝೀಕಾ ವೈರಸ್‌ ಸೋಂಕಿನ ಬಾಲಕಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ಇನ್ನು ಝೀಕಾ ಸೋಂಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಈವರೆಗೂ ಲಭ್ಯವಾಗಿಲ್ಲ ಎಂದರು.

ಬಾಲಕಿ ಕಳೆದ 15 ದಿನಗಳಿಂದ ಜ್ವರ, ವಾಂತಿ, ಭೇದಿಯಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ನವೆಂಬರ್ 13ರಂದು ಜ್ವರ ಕಾಣಿಸಿಕೊಂಡಿತ್ತು. ಮೊದಲು ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಡೆಂಘೀ ಜ್ವರ ದೃಢಪಟ್ಟ ಹಿನ್ನೆಲೆ ವಿಜಯನಗರದ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ವೈದ್ಯರು ಬಾಲಕಿಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಿದ್ದು ಡಿಸೆಂಬರ್ 9ರಂದು ಪಾಸಿಟಿವ್ ಬಂದಿತ್ತು ಎಂದರು.

- Advertisement -

Related news

error: Content is protected !!