Saturday, April 27, 2024
spot_imgspot_img
spot_imgspot_img

ರಾಜ್ಯದ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್

- Advertisement -G L Acharya panikkar
- Advertisement -

ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದಿಂದ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೂ ಬೇಯಿಸಿದ ಮೊಟ್ಟೆ ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.

ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆದಿದ್ದು , 2023ರ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲು ಅನುಮೋದನೆ ಪಡೆಯಲು ಕಸರತ್ತು ನಡೆದಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯ ಭಾಗವಾಗಿ ವಾರದಲ್ಲಿ ಎರಡು ದಿನ ಮೊಟ್ಟೆ ನೀಡಲಾಗುತ್ತಿದೆ. ಈ ಯೋಜನೆಯನ್ನು 9 ಹಾಗೂ 10ನೇ ತರಗತಿಗೂ ವಿಸ್ತರಿಸಬೇಕು ಎಂದು ಪೋಷಕರು ಒತ್ತಾಯಿಸುತ್ತಾ ಬಂದಿದ್ದರು.

ಈ ಯೋಜನೆಯನ್ನು 2021ರಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಜಾರಿಗೆ ತರಲಾಯಿತು. ನಂತರ ರಾಜ್ಯದ ಇತರೆ ಶಾಲೆಗಳ 1 ರಿಂದ 8ನೇ ತರಗತಿಯ ಮಕ್ಕಳಿಗೆ ವಿಸ್ತರಿಸಲಾಯಿತು. ಇಲಾಖೆಯ ಸಮೀಕ್ಷೆಯ ಪ್ರಕಾರ ಶೇ 70ರಷ್ಟು ಮಕ್ಕಳು ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ಆಯ್ಕೆ ಮಾಡಿಕೊಂಡಿದ್ದಾರೆ. ಸುಮಾರು 60 ಲಕ್ಷ ವಿದ್ಯಾರ್ಥಿಗಳಿಗೆ ಬೇಯಿಸಿದ ಮೊಟ್ಟೆಗಳನ್ನು ಪೂರೈಸಲಾಗುತ್ತಿದೆ. ಯೋಜನೆ ಮುಂದುವರಿದರೆ ವರ್ಷಕ್ಕೆ ₹ 300 ಕೋಟಿ ವೆಚ್ಚವಾಗಲಿದೆ.

- Advertisement -

Related news

error: Content is protected !!