Thursday, June 18, 2026
spot_imgspot_img
spot_imgspot_img

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಜಗ್ಗೇಶ್, ನಿರ್ಮಲಾ ಸೀತಾರಾಮನ್ ಗೆ ಟಿಕೆಟ್

- Advertisement -
- Advertisement -

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಎರಡು ಸ್ಥಾನಗಳಿಗೆ ಮಾತ್ರ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದ್ದು ಮತ್ತೊಮ್ಮೆ ಕರ್ನಾಟಕದಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ.

ಮಾಜಿ ಶಾಸಕ ಜಗ್ಗೇಶ್ ರಾಜ್ಯಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ರಾಜ್ಯಸಭಾ ಅಭ್ಯರ್ಥಿ ಆಯ್ಕೆಯಲ್ಲಿ ಕೂಡಾ ವಲಸಿಗ ಅಭ್ಯರ್ಥಿಗೆ ಬಿಜೆಪಿ ಮಣೆ ಹಾಕಿದ್ದು, ಹಿಂದೆ ಆಪರೇಷನ್ ಕಮಲದ ಮೂಲಕ ಜಗ್ಗೇಶ್ ಬಿಜೆಪಿ ಸೇರ್ಪಡೆಯಾಗಿದ್ದರು.

ಜಗ್ಗೇಶ್ ರವರು ಬಿಜೆಪಿ ಸೇರಿದ ಬಳಿಕ ವಿಧಾನ ಪರಿಷತ್ ಸದಸ್ಯರಾಗಿದ್ದರು. ಇದೀಗ ಜಗ್ಗೇಶ್ ಮತ್ತೊಂದು ಅವಕಾಶ ಪಡೆದಿದ್ದಾರೆ. ಇನ್ನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಅವರಿಗೆ ಟಿಕೆಟ್ ಕೈತಪ್ಪಿದೆ.

- Advertisement -

Related news

error: Content is protected !!