Wednesday, May 1, 2024
spot_imgspot_img
spot_imgspot_img

ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ

- Advertisement -G L Acharya panikkar
- Advertisement -

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ , ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌, ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಶುಭ ಕೋರಿದ್ದಾರೆ. “ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆ’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಪಿ.ಟಿ.ಉಷಾ, ವಿ.ವಿಜಯೇಂದ್ರ ಪ್ರಸಾದ್, ವೀರೇಂದ್ರ ಹೆಗ್ಗಡೆ ಮತ್ತು ಇಳಯರಾಜ ಅವರನ್ನು ಅಭಿನಂದಿಸಿ ಪ್ರಧಾನಿ ಮೋದಿ ವೈಯಕ್ತಿಕ ಟ್ವೀಟ್‌ ಅನ್ನೂ ಮಾಡಿದ್ದಾರೆ. “ಪಿಟಿ ಉಷಾ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಯಲ್ಲಿ ಅವರ ಸಾಧನೆಗಳ ಬಗ್ಗೆ ವ್ಯಾಪಕವಾಗಿ ಎಲ್ಲರಿಗೂ ತಿಳಿಸಿದೆ. ಕಳೆದ ಕೆಲವು ವರ್ಷಗಳಿಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸವು ಶ್ಲಾಘನೀಯವಾಗಿದೆ. ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದಕ್ಕಾಗಿ ಅಭಿನಂದನೆಗಳು’ ಎಂದು ಮೋದಿ, ಪಿಟಿ ಉಷಾ ಕುರಿತಾಗಿ ಟ್ವೀಟ್‌ ಮಾಡಿದ್ದಾರೆ.

ಖ್ಯಾತ ನಿರ್ದೇಶಕ ರಾಜಮೌಳಿ ಅವರ ತಂದೆ ಹಾಗೂ ಪ್ರಖ್ಯಾತ ಚಿತ್ರಕಥೆಗಾರ ವಿ.ವಿಜಯೇಂದ್ರ ಪ್ರಸಾದ್‌ ಅವರನ್ನು ನಾಮನಿರ್ದೇಶನ ಮಾಡಿರುವ ಸುದ್ದಿಯನ್ನು ಪ್ರಕಟಿಸಿ ಟ್ವೀಟ್ ಮಾಡಿರುವ ಮೋದಿ, “ವಿ.ವಿಜಯೇಂದ್ರ ಅವರು ದಶಕಗಳಿಂದ ಸೃಜನಾತ್ಮಕ ಲೋಕದೊಂದಿಗೆ ನಂಟು ಹೊಂದಿದ್ದಾರೆ. ಅವರ ಕೃತಿಗಳು ಭಾರತದ ವೈಭವಯುತ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಜಾಗತಿಕವಾಗಿ ತಮ್ಮ ಛಾಪು ಮೂಡಿಸಿವೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಕ್ಕೆ ಅಭಿನಂದನೆಗಳು’ ಎಂದು ಬರೆದಿದ್ದಾರೆ.

ಯುಗದಿಂದ ಯುಗಕ್ಕೆ ಇಳಯರಾಜ ಅವರ ಸಂಗೀತ ಸಾಕಷ್ಟು ಜನರನ್ನು ಮಂತ್ರಮುಗ್ಧರನ್ನಾಗಿ ಮಾಡಿದೆ. ಅವರ ಅನೇಕ ಸೃಷ್ಟಿಗಳು ಭಾವನೆಗಳನ್ನು ಬಹಳ ಸುಂದರವಾಗಿ ಚಿತ್ರಿಸಿದೆ. ಅವರ ಜೀವನ ಪಯಣ ಕೂಡ ಸ್ಫೂರ್ತಿದಾಯಕವಾಗಿದೆ. ವಿನಮ್ರ ಹಿನ್ನಲೆಯಿಂದ ಬಂದು ಇಂದು ಅಪಾರ ಸಾಧನೆ ಮಾಡಿದ್ದಾರೆ. ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

- Advertisement -

Related news

error: Content is protected !!