Friday, March 29, 2024
spot_imgspot_img
spot_imgspot_img

ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು..! ಬೆಂಗಳೂರಿನಲ್ಲಿ ಶಾಲೆ ಆರಂಭಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್

- Advertisement -G L Acharya panikkar
- Advertisement -
vtv vitla
vtv vitla

ಬೆಂಗಳೂರು: ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರವು ನಿರ್ಬಂಧಗಳನ್ನು ಸಡಿಲಗೊಳಿಸಿ, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂನ್ನು ತೆಗೆದು ಹಾಕಿದೆ. ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಶಾಲೆಗಳನ್ನ ಪುನರಾರಂಭಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಶೇ. 100ರಷ್ಟು ಮಕ್ಕಳು ಶಾಲೆಗೆ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಕೊವಿಡ್​ ನಿಯಮ ಪಾಲಿಸಿ ಶಾಲೆಗಳ ಪುನಾರಂಭಕ್ಕೆ ಅವಕಾಶ ನೀಡಲಾಗಿದೆ. ಶಾಲೆ ಆರಂಭಕ್ಕೆ ಕೊವಿಡ್​ ನಿಯಮ ಪಾಲಿಸುವುದು ಕಡ್ಡಾಯ. ಯಾವುದಾದರೂ ತರಗತಿಯಲ್ಲಿ ಮಕ್ಕಳಿಗೆ ಪಾಸಿಟಿವ್ ಬಂದರೆ, ಅಂತಹ ತರಗತಿ ಮುಚ್ಚಿ ಸ್ಯಾನಿಟೈಸ್ ಮಾಡಲಾಗುವುದು. ಶಾಲೆಗಳಿಗೆ ರಜೆ ವಿಚಾರದಲ್ಲಿ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳುತ್ತಾರೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್ ಅಶೋಕ್ ನೈಟ್ ಕರ್ಫ್ಯೂ ಜನವರಿ 31 ರಿಂದ ಇರಲ್ಲ. ಪಬ್ ಆ್ಯಂಡ್ ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೆ. 100 ರಷ್ಟು ಅವಕಾಶ ನೀಡಲಾಗಿದೆ. ಆದರೆ ಸಿನಿಮಾ ಥಿಯೇಟರ್​ಗಳಿಗೆ ಶೇ. 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಅಂತ ತಿಳಿಸಿದರು.

ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಅವಕಾಶ ನೀಡಲಾಗಿದೆ. ಮಂದಿರ, ಮಸೀದಿ, ಚರ್ಚ್​ಗಳಲ್ಲಿ ಸೇವೆ ಪುನಾರಂಭ ಮಾಡಬಹುದು. ಆದರೆ ಧಾರ್ಮಿಕ ಸ್ಥಳಗಳಲ್ಲಿ 50 ಜನ ಮಾತ್ರ ಒಂದೇ ಬಾರಿ ದರ್ಶನ ಪಡೆಯಬಹುದು. ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಹೇರಲಾಗಿದೆ. ಜಿಮ್, ಈಜುಕೊಳದಲ್ಲಿ ಶೇ. 50 ರಷ್ಟು ಅವಕಾಶ ನೀಡಲಾಗಿದೆ ಅಂತ ಆರ್ ಅಶೋಕ್ ಹೇಳಿದರು.

ಪ್ರವಾಸಿತಾಣಗಳ ಭೇಟಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ ಅಂತ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್​​ ಹೇಳಿದ್ದಾರೆ. ಕೊವಿಡ್​ ನಿಯಮ ಪಾಲಿಸಿ ಪ್ರವಾಸಿಗರು ಭೇಟಿ ನೀಡಬಹುದು. ರಾಜ್ಯದ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಿರಲಿವೆ. ಸಫಾರಿ ಸೇರಿದಂತೆ ಎಲ್ಲಾ ಚಟುವಟಿಕೆಗೆ ಅವಕಾಶ ಇರುತ್ತದೆ ಅಂತ ಹೇಳಿದ್ದಾರೆ.

- Advertisement -

Related news

error: Content is protected !!