Thursday, June 18, 2026
spot_imgspot_img
spot_imgspot_img

ರಾಜ್ಯಾದ್ಯಂತ ಹೈ ಅಲರ್ಟ್‌ಗೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ! ಸಂಘಟನೆಯ ಪ್ರಮುಖರು, ಹಿಂದೂ ಕಾರ್ಯಕರ್ತರು ಎಚ್ಚರಿಕೆ ವಹಿಸುವಂತೆ ಸೂಚನೆ

- Advertisement -
- Advertisement -
astr

ಇಂದು ದೇಶದ ವಿವಿಧ ಕಡೆಗಳಲ್ಲಿ ಎನ್‌ಐಎ ದಾಳಿ ನಡೆಸಿದೆ. ಪಿಎಫ್‌ಐ, ಎಸ್‌ಡಿಪಿಐ ಕಛೇರಿ ಹಾಗೂ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಂತೆಯೇ ರಾಜ್ಯದಲ್ಲೂ ಎನ್‌ಐಎ ಮತ್ತು ರಾಜ್ಯ ಪೊಲೀಸರು ದಾಳಿ ನಡೆಸಿದ್ದಾರೆ.

ಕರಾವಳಿ ಸೇರಿ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ. ಸಂಘಪರಿವಾರದ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರಿಗೆ ಅಲರ್ಟ್ ಇರುವಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿಯನ್ನು ಈಗಾಗಲೇ ಎನ್‌ಐಎ ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದು ಗಲಭೆ ಸಾಧ್ಯತೆಯ ಮುನ್ನೆಚ್ಚರಿಕೆಯಾಗಿ ಅಲರ್ಟ್‌ ಇರುವಂತೆ ಗುಪ್ತಚರ ಇಲಾಖೆ ರಾಜ್ಯ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಿದೆ.

ಹಿಂದೂ ಸಂಘಟನೆಯ ಪ್ರಮುಖರು, ಹಿಂದೂ ಕಾರ್ಯಕರ್ತರಿಗೆ ಸಂದೇಶ ರವಾನಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಕೆಲವೊಂದು ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆಯಕಟ್ಟಿನ ಪ್ರದೇಶಲ್ಲಿ ನಾಕಾಬಂಧಿ ಅಳವಡಿಸಲಾಗಿದೆ.

- Advertisement -

Related news

error: Content is protected !!