Saturday, June 13, 2026
spot_imgspot_img
spot_imgspot_img

ರಾಜ್ಯಾದ್ಯಾಂತ 4 ದಿನ ಭಾರಿ ವರ್ಷಧಾರೆ; ದಕ್ಷಿಣ ಕನ್ನಡ ಸಹಿತ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿಯಿಂದ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಭಾರೀ ಮಳೆಯಾಗಿದೆ.

ಶಾಹೀನ್‌ ಚಂಡಮಾರುತದ ಪರಿಣಾಮ ರಾಜ್ಯಾದ್ಯಾಂತ ಇನ್ನೂ ನಾಲ್ಕು ದಿನ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಳ್ಳಾರಿ ಮತ್ತು ಚಿತ್ರದುರ್ಗ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

- Advertisement -

Related news

error: Content is protected !!