Monday, May 6, 2024
spot_imgspot_img
spot_imgspot_img

ರಾಜ್ಯ ಸರ್ಕಾರದಿಂದ ಹಾಸ್ಟೆಲ್​ಗಳಿಗೆ ಹೊಸ ಮಾರ್ಗಸೂಚಿ; ಶಾಲಾ-ಕಾಲೇಜು ಬಂದ್ ವಿಚಾರದಲ್ಲಿ ಮಹತ್ವದ ಹೇಳಿಕೆ

- Advertisement -G L Acharya panikkar
- Advertisement -
vtv vitla
vtv vitla

ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೇಲ್​ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದಿದ್ದಾರೆ. ರಾಜ್ಯದ ಕೆಲ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮೂಹಿಕವಾಗಿ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಒಮಿಕ್ರಾನ್​ ವಿಚಾರದಲ್ಲಿ ಗಾಬರಿ ಪಡುವ ಅಗತ್ಯವಿಲ್ಲ. ಸಂಪುಟ ಸಭೆಯಲ್ಲಿ ಹಾಸ್ಟೆಲ್​ಗಳಲ್ಲಿ ಕೋವಿಡ್​ ಮಾರ್ಗಸೂಚಿಗಳನ್ನು ಜಾರಿಗೆ ತರುವ ಬಗ್ಗೆ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.

vtv vitla
vtv vitla

ರಾಜ್ಯ ಸರ್ಕಾರದ ನಿರ್ದೇಶನದಂತೆ ವಿದ್ಯಾರ್ಥಿಗಳು ಹಾಸ್ಟೆಲ್​ನಲ್ಲಿ ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ. ಊಟ ಮಾಡುವ ವೇಳೆ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ವಿದ್ಯಾರ್ಥಿಗಳು ಅಂತರ ಕಾಯ್ದುಕೊಂಡು ಊಟ ಮಾಡಲು ಹಾಸ್ಟೆಲ್​ಗಳಲ್ಲಿ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಹಾಸ್ಟೆಲ್​​ಗೆ ಹೊಸಬರು ಪ್ರವೇಶಿಸುವಂತಿಲ್ಲ ಹಾಗೂ ಹಾಸ್ಟೆಲ್​ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಸಂಪೂರ್ಣ ಕೋವಿಡ್​ ಲಸಿಕೆಯನ್ನು ಸ್ವೀಕರಿಸುವುದು ಕಡ್ಡಾಯವಾಗಿದೆ

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳನ್ನು ಬಂದ್​ ಮಾಡುವ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಮೌಂಟ್​ ಕಾರ್ಮಲ್​ ಕಾಲೇಜಿನಲ್ಲಿ ಮಾತ್ರ ಪಾಸಿಟಿವ್​ ಕೇಸ್​ಗಳು ವರದಿಯಾಗಿದೆ. ವಿದ್ಯಾರ್ಥಿಗಳ ಆರೋಗ್ಯವು ಸ್ಥಿರವಾಗಿಯೇ ಇದೆ. ರಾಜ್ಯದಲ್ಲಿ ಈವರೆಗೆ 172 ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿದ್ದು, 100 ಮಂದಿ ಗುಣಮುಖರಾಗಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಬಂದ್​ ಮಾಡುವಂತಹ ಅನಿವಾರ್ಯತೆ ಇಲ್ಲ ಎಂದು ಹೇಳಿದ್ದಾರೆ.

vtv vitla
vtv vitla
vtv vitla
- Advertisement -

Related news

error: Content is protected !!